ನವದೆಹಲಿ: ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಭಾನುವಾರ ವಜಾಗೊಳಿಸಲಾಗಿದ್ದು, ಇದರ ನಂತರ ಅಧ್ಯಕ್ಷ ಆರಿಫ್ ಅಲ್ವಿ ಅವರು ಪ್ರಧಾನಿಯವರ ಸಲಹೆಯ ಮೇರೆಗೆ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಅಲ್ಲಿನ ಅಧ್ಯಕ್ಷ ಅಲ್ವಿ ಅವರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಫಾರೂಖ್ ಹಬೀಬ್ ಇಂದು ಮಾಹಿತಿ ನೀಡಿದ್ದಾರೆ, ಇನ್ನು ಆ ದೇಶದಲ್ಲಿ 90 ದಿನಗಳಲ್ಲಿ ಚುನಾವಣೆ ನಡೆಯಲಿದೆ.
ಸಚಿವ ಸಂಪುಟವನ್ನು ವಿಸರ್ಜಿಸಲಾಗಿದೆ ಆದರೆ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಕರ್ತವ್ಯವನ್ನು ಮುಂದುವರಿಸುತ್ತಾರೆ ಎಂದು ಅಲ್ಲಿನ ವಾರ್ತಾ ಸಚಿವ ಫವಾದ್ ಚೌಧರಿ ಹೇಳಿದ್ದಾರೆ.
ಡೆಪ್ಯೂಟಿ ಸ್ಪೀಕರ್ ಖಾಸಿಂ ಸೂರಿ ಅವರು ಖಾನ್ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿದ್ದು, ಇದು ಪಾಕಿಸ್ತಾನದ ಸಂವಿಧಾನ ಮತ್ತು ನಿಯಮಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ. ಇದು ಪ್ರತಿಪಕ್ಷ ನಾಯಕರಲ್ಲಿ ಆಕ್ರೋಶ ಭುಗಿಲೇಳುವಂತೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.