ನವದೆಹಲಿ: ಕಳೆದ ಏಳು ವರ್ಷಗಳಿಂದ ಸರ್ಕಾರ ಸುಧಾರಣೆಗಳೊಂದಿಗೆ ಬಲವಾದ ಆರ್ಥಿಕ ಅಡಿಪಾಯವನ್ನು ಹಾಕುತ್ತಿರುವುದರಿಂದ ಭಾರತವು ಪ್ರಮುಖ ಆರ್ಥಿಕ ಚೇತರಿಕೆಗೆ ಸಾಕ್ಷಿಯಾಗುತ್ತಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧದಿಂದ ಉಂಟಾದ ಆರ್ಥಿಕ ಅನಿಶ್ಚಿತತೆಗಳ ಹೊರತಾಗಿಯೂ ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಉಳಿಯುತ್ತದೆ ಎಂಬುದು ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೆಚ್ಚುತ್ತಿರುವ ಹಣದುಬ್ಬರದ ಬಗ್ಗೆ ಮಾತನಾಡಿದ ಅವರು, ಆರ್ಬಿಐ ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದರು.
ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಮಾತನಾಡಿದ ಕುಮಾರ್, ಜಾಗತಿಕ ಪರಿಸ್ಥಿತಿಯನ್ನು ಗಮನಿಸಿದರೆ, ಪ್ರಪಂಚದಾದ್ಯಂತ ಇಂಧನ ಬೆಲೆಗಳು ಏರುತ್ತಿವೆ. ಇದರ ಪಲಿಣಾಮ ಭಾರತದ ಮೇಲೂ ಬಿದ್ದಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.