ನವದೆಹಲಿ: ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ಆರನೇ ವಾರ್ಷಿಕೋತ್ಸವವನ್ನು ಇಂದು ಆಚರಿಸಲಾಗುತ್ತಿದೆ. 30,160 ಕೋಟಿ ರೂಪಾಯಿಗಳನ್ನು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿಯಲ್ಲಿ 1,33 ,995 ಕ್ಕೂ ಹೆಚ್ಚು ಖಾತೆಗಳಿಗೆ ಯೋಜನೆ ಪ್ರಾರಂಭವಾದಾಗಿನಿಂದ ಇದುವರೆಗೆ ಸಾಲವಾಗಿ ಮಂಜೂರು ಮಾಡಲಾಗಿದೆ.
ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯನ್ನು 5ನೇ ಏಪ್ರಿಲ್ 2016 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರಾರಂಭಿಸಿದರು. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಸಾಲಗಾರರಿಗೆ ಉತ್ಪಾದನೆ, ಸೇವೆಗಳು ಅಥವಾ ವ್ಯಾಪಾರ ವಲಯದಲ್ಲಿ ಗ್ರೀನ್ಫೀಲ್ಡ್ ಉದ್ಯಮವನ್ನು ಸ್ಥಾಪಿಸಲು ಸಾಲವನ್ನು ಒದಗಿಸುತ್ತದೆ.
ಆರ್ಥಿಕ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಯ ಮೇಲೆ ಕೇಂದ್ರೀಕರಿಸುವ ತಳಮಟ್ಟದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ಉದ್ದೇಶವು ಕನಿಷ್ಠ ಒಬ್ಬ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸಾಲಗಾರರಿಗೆ ಮತ್ತು ಪ್ರತಿ ಬ್ಯಾಂಕ್ ಶಾಖೆಯ ಒಬ್ಬ ಮಹಿಳಾ ಸಾಲಗಾರರಿಗೆ 10 ಲಕ್ಷದಿಂದ ಒಂದು ಕೋಟಿ ರೂಪಾಯಿಗಳ ನಡುವೆ ಸಾಲವನ್ನು ಒದಗಿಸುವುದು ಇದರ ಗುರಿ.
2019-20 ರಲ್ಲಿ, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯನ್ನು 2025 ರವರೆಗೆ ವಿಸ್ತರಿಸಲಾಯಿತು. ಭಾರತವು ವೇಗವಾಗಿ ಬೆಳೆಯುತ್ತಿರುವಂತೆ, ಸಂಭಾವ್ಯ ಉದ್ಯಮಿಗಳ ದೊಡ್ಡ ಭರವಸೆಗಳು, ಆಕಾಂಕ್ಷೆಗಳು ಮತ್ತು ನಿರೀಕ್ಷೆಗಳು, ವಿಶೇಷವಾಗಿ ಮಹಿಳೆಯರು ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಹೆಚ್ಚುತ್ತಿವೆ. ಈ ಯೋಜನೆಯು ಎಸ್ಸಿ, ಎಸ್ಟಿ ಮತ್ತು ಮಹಿಳಾ ಉದ್ಯಮಿಗಳಿಗೆ ಅವರ ಶಕ್ತಿ ಮತ್ತು ಉತ್ಸಾಹವನ್ನು ಬೆಂಬಲಿಸುವ ಮೂಲಕ ಮತ್ತು ಅವರ ಹಾದಿಯಿಂದ ಅನೇಕ ಅಡೆತಡೆಗಳನ್ನು ತೆಗೆದುಹಾಕುವ ಮೂಲಕ ಅವರ ಕನಸುಗಳನ್ನು ನನಸಾಗಿಸುವ ಹಾದಿಯನ್ನು ಸುಗಮಗೊಳಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.