ನವದೆಹಲಿ: ಕೇಂದ್ರ ಬಜೆಟ್ 2022-23 ರಲ್ಲಿ ಘೋಷಿಸಿದಂತೆ, ದೇಶದ ವಿವಿಧ ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ (ಡಿಬಿಯು) ಗಳನ್ನು ಸ್ಥಾಪಿಸಲಾಗುವುದು, ಇದರಿಂದ ಡಿಜಿಟಲ್ ಬ್ಯಾಂಕಿಂಗ್ನ ಪ್ರಯೋಜನಗಳನ್ನು ದೇಶದಲ್ಲಿ ಗ್ರಾಹಕ ಸ್ನೇಹಿ ರೀತಿಯಲ್ಲಿ ಒದಗಿಸಲು ಸಾಧ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ.ಭಾಗವತ್ ಕರದ್ ಅವರು ಈ ವಿಷಯ ತಿಳಿಸಿದ್ದಾರೆ.
ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಸ್ಥಾಪಿಸಲು ಆರ್ಬಿಐನಿಂದ ಯಾವುದೇ ಹಣವನ್ನು ನಿಗದಿಪಡಿಸಲಾಗಿಲ್ಲ ಮತ್ತು ಡಿಜಿಟಲ್ ಬ್ಯಾಂಕಿಂಗ್ ಘಟಕಗಳು ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿರುವಂತೆ, ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಮಾರ್ಗಸೂಚಿಯನ್ನು ತಯಾರಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.
ಆರ್ಬಿಐ ಮಾನದಂಡಗಳನ್ನು ವಿವರಿಸಿದ್ದು, ಅದರಂತೆ ಹೆಚ್ಚಿನ ಮಹಿಳಾ ಜನಸಂಖ್ಯೆ, ಯುವಕರು, ಎಂಎಸ್ಎಂಇಗಳು, ರಫ್ತುಗಳು, ಭೌಗೋಳಿಕವಾಗಿ ಮತ್ತು ಆಯಕಟ್ಟಿನ ಪ್ರಮುಖ ಸ್ಥಳಗಳು, ಈಶಾನ್ಯ ಪ್ರದೇಶಗಳು, ಮಧ್ಯಮ ಮಟ್ಟದ ಡಿಜಿಟಲ್ ಅಳವಡಿಕೆ ಇತ್ಯಾದಿಗಳನ್ನು ಡಿಬಿಯುಗಳ ಸ್ಥಾಪನೆಗಾಗಿ 75 ಜಿಲ್ಲೆಗಳ ಪಟ್ಟಿಯನ್ನು ಅಂತಿಮಗೊಳಿಸುವಾಗ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
In the last 8 years the Government of India has focussed on port-led development which includes expanding port capacities and making the existing systems even more efficient. Waterways are being harnessed to ensure Indian products get access to new markets. pic.twitter.com/DChKfDfZwY
— Narendra Modi (@narendramodi) April 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.