ನವದೆಹಲಿ: ಏಪ್ರಿಲ್ 7 ರಿಂದ ಬಿಜೆಪಿ “ಸಮಾಜಿಕ್ ನ್ಯಾಯ್ ಪಖ್ವಾಡ್” ಅನ್ನು ಪ್ರಾರಂಭಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ತಮ್ಮನ್ನು ಸೇವೆಗೆ ಸಮರ್ಪಿಸಿಕೊಳ್ಳುವಂತೆ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.
14 ದಿನಗಳ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಬಿಜೆಪಿಗರು ಮಾಡಬೇಕಾದ ಕಾರ್ಯಗಳನ್ನು ಮೋದಿ ಸಂಸದರಿಗೆ ವಿವರಿಸಿದ್ದಾರೆ.
ಪಕ್ಷದ ಸಂಸ್ಥಾಪನಾ ದಿನಕ್ಕೆ ಒಂದು ದಿನ ಮುಂಚಿತವಾಗಿ ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ಸಮಾಜದ ವಿವಿಧ ವರ್ಗಗಳನ್ನು ಗುರಿಯಾಗಿಸಿಕೊಂಡು ಸರ್ಕಾರದ ಹಲವಾರು ಕಲ್ಯಾಣ ಯೋಜನೆಗಳನ್ನು ಜನರನ್ನು ತಲುಪುವಂತೆ ಮಾಡಬೇಕು ಎಂದು ಸಂಸದರಿಗೆ ಸೂಚನೆ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಮೊದಲ ಬಾರಿಗೆ 100 ಸಂಸದರನ್ನು ಹೊಂದಿರುವ ಸಾಧನೆಯನ್ನು ಬಿಜೆಪಿ ಸಾಧಿಸಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಈ ಸಭೆಯಲ್ಲಿ ತಿಳಿಸಿದ್ದಾರೆ.
ಸಂಸದರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮೋದಿ ಕೇಳಿಕೊಂಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮೋದಿ ಅವರು ಬುಧವಾರ ಬಿಜೆಪಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.