ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ, ಅವರ ತುಟ್ಟಿಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ 2.75ರಷ್ಟು ಹೆಚ್ಚಿಸಿದೆ.
ತುಟ್ಟಿಭತ್ಯೆ ಹೆಚ್ಚಳಕ್ಕೆ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ.
ಈ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಬಜೆಟ್ ಮೇಲಿನ ಚರ್ಚೆಯ ವೇಳೆ 7ನೇ ವೇತನ ಆಯೋಗ ಜಾರಿಗೆ ಅಧಿಕಾರಿಗಳ ವೇತನ ಸಮಿತಿ ರಚನೆ ಬಗ್ಗೆ ಸಿಎಂ ಘೋಷಣೆ ಮಾಡಿದ್ದರು. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಸರ್ಕಾರಿ ನೌಕರರ ಮತಬುಟ್ಟಿ ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿದ್ದಾರೆ. ಇದರ ಭಾಗವಾಗಿ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು.
— Basavaraj S Bommai (@BSBommai) April 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.