ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳು ಬಜೆಟ್ ಭಾಷಣದಲ್ಲಿ ಘೋಷಿಸಿದ್ದಂತೆ ಮಾಜಿ ಕುಸ್ತಿಪಟುಗಳ ಮಾಸಾಶನ ಒಂದು ಸಾವಿರ ರೂಪಾಯಿ ಹೆಚ್ಚಿಸಿ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
50 ವರ್ಷ ಮೇಲ್ಪಟ್ಟ ಮಾಜಿ ಕುಸ್ತಿ ಪೈಲ್ವಾನ್ಗಳ ಮಾಸಾಶನ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23 ರ ಬಜೆಟ್ನಲ್ಲಿ ಘೋಷಿಸಿದದ್ದರು. ಅದರಂತೆ ಮಾಸಾಶನವನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯಮಟ್ಟ 2500 ರೂ.ನಿಂದ 3500, ರಾಷ್ಟ್ರಮಟ್ಟ 3000 ರೂ.ನಿಂದ 4000, ಅಂತರರಾಷ್ಟ್ರೀಯ ಮಟ್ಟ4000 ರೂ.ನಿಂದ 5000 ರೂ.ಗೆ ಹೆಚ್ಚಿಸಲಾಗಿದೆ. ಏಪ್ರಿಲ್ ಒಂದರಿಂದಲೇ ಈ ಆದೇಶವೂ ಜಾರಿಯಾಗಲಿದೆ. ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಮಾಜಿ ಪೈಲ್ವಾನರಿಗೆ ಮಾಸಾಶನ ಹೆಚ್ಚಿಸುವುವಂತೆ ಹಲವು ಬಾರಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾಸಾಶನ ಹೆಚ್ಚಿಸುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಭರವಸೆ ನೀಡಿದ್ದರು. ಅದರಂತೆ, ಈ ವರ್ಷದ ಬಜೆಟ್ನಲ್ಲಿ ಮಾಜಿ ಪೈಲ್ವಾನರ ಮಾಶಾಸನ ಒಂದು ಸಾವಿರ ರೂಪಾಯಿ ಹೆಚ್ಚಿಸಿ ಘೋಷಿಸಿ, ಒಂದೇ ತಿಂಗಳಲ್ಲಿ ಜಾರಿಗೆ ತರಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.