ಬೆಂಗಳೂರು: ಕರ್ನಾಟಕದಲ್ಲಿ 3000 ಮಾದರಿ ಸರ್ಕಾರ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಘೋಷಣೆ ಮಾಡಿದ್ದಾರೆ.
ಈಗಾಗಲೇ ಬಜೆಟ್ನಲ್ಲಿ ಮಾದರಿ ಶಾಲೆ ಪ್ರಾರಂಭಿಸುವ ಬಗ್ಗೆ ಘೋಷಣೆ ಮಾಡಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ಶಾಲೆಗಳನ್ನು ತೆರೆಯಲಾಗುತ್ತದೆ. ಶಾಲೆಗಳಲ್ಲಿ ಇಂಗ್ಲೀಷ್ ವಿಷಯವನ್ನು ಕಲಿಸಲಾಗುವುದು. ತರಗತಿಗೊಂದು ಕೊಠಡಿ ಹಾಗೂ ಶಿಕ್ಷಕರು ಕೂಡ ಇರಲಿದ್ದಾರೆ ಎಂದಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದುಕೊಂಡರು ವೃತ್ತಿಪರ ಕೋರ್ಸ್ ಗಳ ಶಿಕ್ಷಣ ಪಡೆಯಲು ಕಷ್ಟ ಎಂಬ ಮನಸ್ಥಿತಿ ಜನರಲ್ಲಿದೆ. ರಾಜ್ಯದಲ್ಲಿನ 47 ಸಾವಿರಕ್ಕೂ ಹೆಚ್ಚು ಸರಕಾರಿ ಶಾಲೆಗಳಿವೆ. 3000 ಶಾಲೆಗಳಲ್ಲಿ ಹತ್ತಕ್ಕಿಂತ ಕಡಿಮೆ ಮಕ್ಕಳಿದ್ದಾರೆ. 542 ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿ ಇದ್ದರೂ ಶಾಲೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ಸರಕಾರವು ಪಠ್ಯ ಪುಸ್ತಕ ಮುದ್ರಣ ದುಬಾರಿಯಾದರೂ ಕೂಡ ಪ್ರಾಥಮಿಕ ಹಂತದಲ್ಲೇ ಕನ್ನಡದ ಜೊತೆಗೆ ಇಂಗ್ಲೀಷ್ ಅನ್ನು ಪಠ್ಯಪುಸ್ತಕಗಳಲ್ಲಿ ಒಳಪಡಿಸಿ ಇಂಗ್ಲಿಷ್ ಪರಿಚಯವಾಗುವಂತೆ ಮಾಡುತ್ತಿದೆ. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಿ ಎಲ್ಲರೂ ಪ್ರೀತಿಸೋಣ ಘೋಷಿಸೋಣ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.