ನವದೆಹಲಿ: ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಸರ್ಕಾರವು 17 ಕೋಟಿ 90 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ಗಳನ್ನು ಫಲಾನುಭವಿಗಳಿಗೆ ಒದಗಿಸಿದೆ.
ನಿನ್ನೆ ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಈ ವಿಷಯ ತಿಳಿಸಿದ್ದಾರೆ.
ವಿಶ್ವದ ಅತಿದೊಡ್ಡ ಆರೋಗ್ಯ ಕಾರ್ಯಕ್ರಮವಾಗಿರುವ ಈ ಯೋಜನೆಯು ದುರ್ಬಲ ಕುಟುಂಬಗಳಿಗೆ ವಾರ್ಷಿಕ ಐದು ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ ಮತ್ತು ದೇಶದಾದ್ಯಂತ ಹತ್ತು ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.
ಮೂರು ಕೋಟಿ 28 ಲಕ್ಷಕ್ಕೂ ಹೆಚ್ಚು ಜನರು ಈ ಯೋಜನೆಯಡಿ ಚಿಕಿತ್ಸೆ ಪಡೆದಿದ್ದಾರೆ.
ಒಡಿಶಾ ಮತ್ತು ದೆಹಲಿ ಈ ಯೋಜನೆಗೆ ಸೇರ್ಪಡೆಗೊಂಡಿಲ್ಲ. ಪಶ್ಚಿಮ ಬಂಗಾಳವು ಜನವರಿ 2019 ರಲ್ಲಿ ಯೋಜನೆಯಿಂದ ಹಿಂದೆ ಸರಿದಿದೆ ಎಂದು ಅವರು ಹೇಳಿದರು. ಈ ಯೋಜನೆಯು ದೇಶದ ಜನರ ಆರೋಗ್ಯ ವೆಚ್ಚವನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿ ಕೊಡುಗೆ ನೀಡಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.