ನವದೆಹಲಿ: ವಿಶ್ವ ಆರೋಗ್ಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿ, ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ಖಾತ್ರಿಪಡಿಸುವತ್ತ ಗಮನಹರಿಸುವ ಮೂಲಕ ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆ (WHO) ಘೋಷಿಸಿದ ವಿಶ್ವ ಆರೋಗ್ಯ ದಿನವನ್ನು ಪ್ರತಿ ವರ್ಷ ಏಪ್ರಿಲ್ 7 ರಂದು ಆಚರಿಸಲಾಗುತ್ತದೆ. ಈ ವರ್ಷದ ವಿಶ್ವ ಆರೋಗ್ಯ ದಿನವು WHO ಮನುಷ್ಯರು ಮತ್ತು ಭೂಮಿಯನ್ನು ಆರೋಗ್ಯವಾಗಿಡಲು ಆರಂಭಿಸಿರುವ ಆಂದೋಲಗಳನ್ನುನ್ನು ಉತ್ತೇಜಿಸಲು ಅಗತ್ಯವಾದ ತುರ್ತು ಕ್ರಮಗಳ ಮೇಲೆ ಜಾಗತಿಕ ಗಮನವನ್ನು ಕೇಂದ್ರೀಕರಿಸಿದೆ.
‘ವಿಶ್ವ ಆರೋಗ್ಯ ದಿನದ ಶುಭಾಶಯಗಳು. ಪ್ರತಿಯೊಬ್ಬರೂ ಕೂಡ ಉತ್ತಮ ಆರೋಗ್ಯ ಮತ್ತು ಕ್ಷೇಮದಿಂದ ಆಶೀರ್ವದಿತರಾಗಲಿದೆ. ಇಂದು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಅವರ ಕಠಿಣ ಪರಿಶ್ರಮವೇ ನಮ್ಮ ಭೂಮಿಯನ್ನು ರಕ್ಷಿಸಿದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಭಾರತ ಸರ್ಕಾರವು ಅವಿರತವಾಗಿ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.
ದೇಶದ ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಖಾತರಿಪಡಿಸುವತ್ತ ಗಮನ ಹರಿಸಲಾಗಿದೆ ಎಂದು ಮೋದಿ ಹೇಳಿದರು.
‘ವಿಶ್ವದ ಅತಿದೊಡ್ಡ ಆರೋಗ್ಯ ರಕ್ಷಣೆ ಯೋಜನೆಯಾದ ಆಯುಷ್ಮಾನ್ ಭಾರತ್ಗೆ ನಮ್ಮ ರಾಷ್ಟ್ರವು ನೆಲೆಯಾಗಿದೆ ಎಂಬುದು ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆ ತರುತ್ತದೆ’ ಎಂದು ಅವರು ಸರಣಿ ಟ್ವೀಟ್ಗಳಲ್ಲಿ ಹೇಳಿದ್ದಾರೆ.
‘ಪ್ರಧಾನಿ ಜನೌಷಧಿಯಂತಹ ಯೋಜನೆಗಳ ಫಲಾನುಭವಿಗಳೊಂದಿಗೆ ನಾನು ಸಂವಾದ ನಡೆಸಿದಾಗ ನನಗೆ ತುಂಬಾ ಸಂತೋಷವಾಗುತ್ತದೆ. ಕೈಗೆಟಕುವ ದರದ ಆರೋಗ್ಯ ರಕ್ಷಣೆಯತ್ತ ನಮ್ಮ ಗಮನವು ಬಡ ಮತ್ತು ಮಧ್ಯಮ ವರ್ಗದವರಿಗೆ ಗಮನಾರ್ಹ ಉಳಿತಾಯವನ್ನು ಖಾತ್ರಿಪಡಿಸಿದೆ’ ಎಂದು ಮೋದಿ ಪ್ರತಿಪಾದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.