ನವದೆಹಲಿ: ಸ್ವಾತಂತ್ರ್ಯದ 75 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದ ಉಧಮ್ಪುರದ ಗ್ರಾಮ ಸದ್ದಲ್ ಕೇಂದ್ರ ಸರ್ಕಾರದ ‘ಅನ್ಟೈಡ್ ಗ್ರ್ಯಾಂಟ್ಸ್’ ಯೋಜನೆಯಡಿ ಬುಧವಾರ ಮೊದಲ ಬಾರಿಗೆ ವಿದ್ಯುತ್ ಪಡೆಯುವ ಮೂಲಕ ಕತ್ತಲೆಯಿಂದ ಮುಕ್ತಿ ಪಡೆದುಕೊಂಡಿದೆ.
ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವುದರಿಂದ ಈ ಗ್ರಾಮದ ನಿವಾಸಿಗಳಲ್ಲಿ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಆಶಾಭಾವನೆ ಮೂಡಿದೆ. ಮೊದಲು, ಈ ಹಳ್ಳಿಯಲ್ಲಿ ಸಂಜೆಯ ಸಮಯದಲ್ಲಿ ಮೇಣದಬತ್ತಿಗಳು ಮತ್ತು ಎಣ್ಣೆ ದೀಪಗಳು ಮಾತ್ರ ಉರಿಯುತ್ತಿತ್ತು.
ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಆಡಳಿತ, ಉಧಮ್ಪುರ ಆಡಳಿತ ಮತ್ತು ವಿದ್ಯುತ್ ಇಲಾಖೆಗೆ ಗ್ರಾಮಸ್ಥರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ, 25KVA ಟ್ರಾನ್ಸ್ಫಾರ್ಮರ್ ಅನ್ನು ಅಳವಡಿಸಿದ ನಂತರ ಗ್ರಾಮದ ಸುಮಾರು 25 ಮನೆಗಳು ವಿದ್ಯುತ್ ಪಡೆದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.