ಬೆಂಗಳೂರು : ಬೆಳೆಯೇರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.
ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.
ಇಂದು ಉಡುಪಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ನಾಳೆ ಮಂಗಳೂರಿನಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.