ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಮಾರ್ಚ್ 31, 2026 ರವರೆಗೆ ಕೇಂದ್ರ ಪ್ರಾಯೋಜಿತ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದ ಪರಿಷ್ಕೃತ ಯೋಜನೆಯ ಮುಂದುವರಿಕೆಗೆ ಅನುಮೋದನೆ ನೀಡಿದೆ.
ಈ ಯೋಜನೆಯನ್ನು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಲಾಗುತ್ತಿದೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಪಂಚಾಯತ್ ರಾಜ್ ಸಂಸ್ಥೆಗಳ ಆಡಳಿತ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರವು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.
ಈ ಯೋಜನೆಗೆ ಒಟ್ಟು ವೆಚ್ಚವು 5,9 11 ಕೋಟಿ ರೂಪಾಯಿಗಳಾಗಿದ್ದು, ಕೇಂದ್ರದ ಪಾಲು ರೂ. 3700 ಕೋಟಿ ಮತ್ತು ರೂ. 2211 ಕೋಟಿ ರಾಜ್ಯ ಸರ್ಕಾರದ ಪಾಲು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.