ನವದೆಹಲಿ: ಕಳೆದ ಹಣಕಾಸು ವರ್ಷದ ಏಪ್ರಿಲ್ನಿಂದ ಫೆಬ್ರವರಿ ಅವಧಿಯಲ್ಲಿ ದೇಶದಲ್ಲಿ ಖನಿಜ ಉತ್ಪಾದನೆಯು 13% ಕ್ಕಿಂತ ಹೆಚ್ಚು ಬೆಳವಣಿಗೆಯನ್ನು ದಾಖಲಿಸಿದೆ
ಕಳೆದ ಹಣಕಾಸು ವರ್ಷದಲ್ಲಿ ಏಪ್ರಿಲ್ನಿಂದ ಫೆಬ್ರವರಿ ಅವಧಿಯಲ್ಲಿ ಖನಿಜ ಉತ್ಪಾದನೆಯು 13.2 ಪ್ರತಿಶತ ಬೆಳವಣಿಗೆಯನ್ನು ದಾಖಲಿಸಿದೆ. ಕಳೆದ ವರ್ಷದ ಫೆಬ್ರವರಿಗೆ ಹೋಲಿಸಿದರೆ ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಗಣಿಗಾರಿಕೆ ಮತ್ತು ಕಲ್ಲುಗಣಿಗಾರಿಕೆ ವಲಯದ ಖನಿಜ ಉತ್ಪಾದನೆಯ ಸೂಚ್ಯಂಕವು ಶೇಕಡಾ 4.5 ರಷ್ಟು ಹೆಚ್ಚಾಗಿದೆ ಎಂದು ಕಲ್ಲಿದ್ದಲು ಸಚಿವಾಲಯ ತಿಳಿಸಿದೆ.
ಈ ವರ್ಷದ ಫೆಬ್ರವರಿಯಲ್ಲಿ ಪ್ರಮುಖ ಖನಿಜಗಳ ಉತ್ಪಾದನೆಯ ಮಟ್ಟ – ಕಲ್ಲಿದ್ದಲು 795 ಲಕ್ಷ ಟನ್, ಲಿಗ್ನೈಟ್ 47 ಲಕ್ಷ ಟನ್, ಪೆಟ್ರೋಲಿಯಂ (ಕಚ್ಚಾ) 23 ಲಕ್ಷ ಟನ್, ಕ್ರೋಮೈಟ್ 373 ಸಾವಿರ ಟನ್ ಮತ್ತು ಚಿನ್ನ 125 ಕಿಲೋಗ್ರಾಂ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.