ನವದೆಹಲಿ: ವಾಯುವ್ಯ ದೆಹಲಿಯ ಜಹಾಂಗೀರ್ಪುರಿಯಲ್ಲಿ ಶನಿವಾರ ಸಂಜೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡೂ ಸಮುದಾಯಗಳ 23 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಹಿಂಸಾಚಾರದಲ್ಲಿ ಎಂಟು ಪೊಲೀಸರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
“23 ಜನರನ್ನು ಬಂಧಿಸಲಾಗಿದೆ. ಬಂಧಿತರು ಎರಡೂ ಸಮುದಾಯದಯಕ್ಕೆ ಸೇರಿದವರು. ವರ್ಗ, ಧರ್ಮ, ಸಮುದಾಯ ಮತ್ತು ಧರ್ಮವನ್ನು ಲೆಕ್ಕಿಸದೆ ಯಾವುದೇ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರಕರಣವನ್ನು ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಾಲ್ಕು ವಿಧಿವಿಜ್ಞಾನ ತಂಡಗಳು ಇಂದು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿವೆ. ಸಿಸಿಟಿವಿ ದೃಶ್ಯಾವಳಿ ಮತ್ತು ಡಿಜಿಟಲ್ ಮಾಧ್ಯಮಗಳ ವಿಶ್ಲೇಷಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.