ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕನ್ ಪ್ರಜೆ, ಪುಲಿಟ್ಜರ್ ಪ್ರಶಸ್ತಿ ವಿಜೇತ ಬರಹಗಾರ್ತಿ ಜುಂಪ ಲಹಿರಿಯವರು ಪ್ರತಿಷ್ಠಿತ 2014ರ ‘ನ್ಯಾಷನಲ್ ಹ್ಯುಮಾನಿಟೇರಿಯನ್ ಮೆಡಲ್’ಗೆ ಪಾತ್ರರಾಗಿದ್ದಾರೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಈ ಪ್ರಶಸ್ತಿಯನ್ನು ಸೆ.೮ರಂದು ವೈಟ್ಹೌಸ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ.
‘ತನ್ನ ಕೃತಿಯಲ್ಲಿ ಲಹಿರಿಯವರು ಭಾರತ-ಅಮೆರಿಕ ಅನುಭವನ್ನು ಅತ್ಯಂತ ಸುಂದರವಾಗಿ ಪ್ರಜ್ವಲಿಸುವಂತೆ ಮಾಡಿದ್ದಾರೆ’ ಎಂದು ವೈಟ್ಹೌಸ್ ಪ್ರಕಟನೆಯಲ್ಲಿ ತಿಳಿಸಿದೆ.
ಲಹಿರಿಯವರು ಬರೆದ ‘Interpreter of Maladies ’ ಫಿಕ್ಷನ್ಗೆ 1999ರಲ್ಲಿ ಪುಲಿಟ್ಜರ್ ಪ್ರಶಸ್ತಿ ಲಭಿಸಿತ್ತು. ಪ್ರಸ್ತುತ ಅವರು ಪ್ರಿನ್ಸ್ಟನ್ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.