ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್ನ ಸಭೆಗಳಲ್ಲಿ ಭಾಗವಹಿಸಲು ಯುಎಸ್ಎಗೆ ಅಧಿಕೃತ ಭೇಟಿ ನೀಡಿದ್ದಾರೆ.
ಅವರು ಜಿ-20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ಗಳ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ನಿನ್ನೆ ರಾತ್ರಿ ಸಚಿವರು ಅಮೆರಿಕಕ್ಕೆ ಪ್ರಯಾಣಿಸಿದ್ದಾರೆ.
ಇಂಡೋನೇಷ್ಯಾ, ದಕ್ಷಿಣ ಕೊರಿಯಾ, ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳೊಂದಿಗೆ ದ್ವಿಪಕ್ಷೀಯ ಸಭೆಗಳಲ್ಲಿ ಸೀತಾರಾಮನ್ ಭಾಗವಹಿಸಲಿದ್ದಾರೆ.
ಮಾತ್ರವಲ್ಲದೇ ಸೀತಾರಾಮನ್ ಅವರು ಸೆಮಿಕಂಡಕ್ಟರ್, ಎನರ್ಜಿ ಮತ್ತು ಭಾರತ ಸರ್ಕಾರಕ್ಕೆ ಆದ್ಯತೆಯ ಇತರ ವಲಯಗಳ ಸಿಇಒಗಳೊಂದಿಗೆ ಸಭೆಗಳನ್ನು ನಡೆಸುತ್ತಾರೆ.
ವಿಶ್ವ ಬ್ಯಾಂಕ್, IMF, G-20 ಮತ್ತು ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ನೊಂದಿಗಿನ ಅಧಿಕೃತ ಸಭೆಗಳನ್ನು ನಡೆಸಲಿದ್ದಾರೆ. ಹಣಕಾಸು ಸಚಿವರು ವಾಷಿಂಗ್ಟನ್ DC ಮೂಲದ ಪ್ರಮುಖ ಚಿಂತಕರ ಚಾವಡಿಯಾದ ಅಟ್ಲಾಂಟಿಕ್ ಕೌನ್ಸಿಲ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಭೇಟಿಯ ಸಮಯದಲ್ಲಿ, ಸೀತಾರಾಮನ್ ಅವರು ಅಂತರರಾಷ್ಟ್ರೀಯ ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕರು ಆಯೋಜಿಸಿರುವ ಕ್ರಾಸ್ರೋಡ್ನಲ್ಲಿ ಹಣದ ಕುರಿತು ಉನ್ನತ ಮಟ್ಟದ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.