ನವದೆಹಲಿ: ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿಮಾ ಯೋಜನೆಯನ್ನು ಮತ್ತೆ 180 ದಿನಗಳವರೆಗೆ ವಿಸ್ತರಿಸಲಾಗಿದೆ.
“ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ (PMGKP): ಕೋವಿಡ್-19 ವಿರುದ್ಧ ಹೋರಾಡುವ ಆರೋಗ್ಯ ಕಾರ್ಯಕರ್ತರಿಗೆ ವಿಮಾ ಯೋಜನೆಯನ್ನು 19 ಏಪ್ರಿಲ್, 2022 ರಿಂದ ಮತ್ತೆ 180 ದಿನಗಳವರೆಗೆ ವಿಸ್ತರಿಸಲಾಗಿದೆ” ಎಂದು ಸರ್ಕಾರವು ಆದೇಶದಲ್ಲಿ ತಿಳಿಸಿದೆ.
“ಕೋವಿಡ್-19 ರೋಗಿಗಳನ್ನು ನೋಡಿಕೊಳ್ಳಲು ನಿಯೋಜಿಸಲಾದ ಆರೋಗ್ಯ ಕಾರ್ಯಕರ್ತರ ಅವಲಂಬಿತರಿಗೆ ಸುರಕ್ಷತೆ ಒದಗಿಸುವುದನ್ನು ಮುಂದುವರಿಸಲು ನೀತಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಕುರಿತು 19ನೇ ಏಪ್ರಿಲ್ 2022 ದಿನಾಂಕದ ಪತ್ರವನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು , ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗಿದೆ.
PMGKP ಯೋಜನೆಯನ್ನು ಮಾರ್ಚ್ 30, 2020 ರಂದು ಕೋವಿಡ್-19 ರೋಗಿಗಳ ನೇರ ಸಂಪರ್ಕದಲ್ಲಿದ್ದ ಮತ್ತು ಆರೈಕೆಯಲ್ಲಿದ್ದ ಸಮುದಾಯ ಆರೋಗ್ಯ ಕಾರ್ಯಕರ್ತರು ಮತ್ತು ಖಾಸಗಿ ಆರೋಗ್ಯ ಕಾರ್ಯಕರ್ತರು ಸೇರಿದಂತೆ 50 ಲಕ್ಷದಿಂದ 22.12 ಲಕ್ಷ ಆರೋಗ್ಯ ಸೇವೆ ಒದಗಿಸುವವರಿಗೆ ಸಮಗ್ರ ವೈಯಕ್ತಿಕ ಅಪಘಾತ ರಕ್ಷಣೆಯನ್ನು ಒದಗಿಸಲು ಪ್ರಾರಂಭಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.