ಗಾಂಧಿನಗರ: ಆಯುಷ್ ವಲಯವು ಉತ್ಪಾದನೆಯಲ್ಲಿ ಅಭೂತಪೂರ್ವ ಬೆಳವಣಿಗೆಯೊಂದಿಗೆ 18 ಶತಕೋಟಿ ಯುಎಸ್ಡಿಗಿಂತಲೂ ಹೆಚ್ಚಾಗಿದೆ ಎಂದು ಗಾಂಧಿನಗರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ನಾವು ಈಗಾಗಲೇ ಆಯುಷ್ ಔಷಧಗಳು, ಪೂರಕಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆಯಲ್ಲಿ ಅಭೂತಪೂರ್ವ ಬೆಳವಣಿಗೆಯನ್ನು ಕಾಣುತ್ತಿದ್ದೇವೆ. 2014 ರಲ್ಲಿ, ಆಯುಷ್ ವಲಯವು USD 3 ಶತಕೋಟಿಗಿಂತ ಕಡಿಮೆಯಿತ್ತು, ಇಂದು ಅದು USD 18 ಶತಕೋಟಿಗಿಂತ ಹೆಚ್ಚಾಗಿದೆ ಎಂದಿದ್ದಾರೆ.
ಸಾಂಪ್ರದಾಯಿಕ ಔಷಧಿಗಳ ಕ್ಷೇತ್ರದಲ್ಲಿ ಸ್ಟಾರ್ಟ್ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ಆಯುಷ್ ಸಚಿವಾಲಯವು ಹಲವಾರು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು. ಕೆಲವು ದಿನಗಳ ಹಿಂದೆ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಅಭಿವೃದ್ಧಿಪಡಿಸಿದ ಇನ್ಕ್ಯುಬೇಶನ್ ಸೆಂಟರ್ ಅನ್ನು ಉದ್ಘಾಟಿಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
2022 ರಲ್ಲಿಯೇ ಇದುವರೆಗೆ ಭಾರತದಿಂದ 14 ಸ್ಟಾರ್ಟ್ಅಪ್ಗಳು ಯುನಿಕಾರ್ನ್ ಕ್ಲಬ್ಗೆ ಸೇರ್ಪಡೆಗೊಂಡಿವೆ ಎಂದು ಮಾಹಿತಿ ನೀಡಿದರು.
“ನಮ್ಮ ಆಯುಷ್ ಸ್ಟಾರ್ಟಪ್ಗಳಿಂದ ಶೀಘ್ರದಲ್ಲೇ ಯುನಿಕಾರ್ನ್ಗಳು ಹೊರಹೊಮ್ಮುತ್ತವೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಆಶಿಸಿದರು.
ಔಷಧೀಯ ಸಸ್ಯಗಳ ಉತ್ಪಾದನೆಯು ರೈತರ ಆದಾಯ ಮತ್ತು ಜೀವನೋಪಾಯವನ್ನು ಹೆಚ್ಚಿಸಲು ಮತ್ತು ಉದ್ಯೋಗ ಸೃಷ್ಟಿಯ ವ್ಯಾಪ್ತಿಯನ್ನು ಹೆಚ್ಚಿಸಲು ಉತ್ತಮ ಸಾಧನವಾಗಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.