ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚುನಾವಣೆಯ ಸಂದರ್ಭದಲ್ಲಿ ತಾವು ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದಾರೆ. ಹಿರಿಯ ಸಂತರು, ಪುರೋಹಿತರು, ದಾರ್ಶನಿಕರು ಮತ್ತು ಸಾಧುಗಳ ಕಲ್ಯಾಣಕ್ಕಾಗಿ “ಪುರೋಹಿತ್ ಕಲ್ಯಾಣ ಮಂಡಳಿ” ಯ ರಚನೆಯನ್ನು ಘೋಷಣೆ ಮಾಡಿದ್ದಾರೆ.
ಫೆಬ್ರವರಿಯಲ್ಲಿ, ತಮ್ಮ ಚುನಾವಣಾ ಪ್ರಚಾರದ ಭಾಗವಾಗಿ ಸಿಎಂ ಆದಿತ್ಯನಾಥ್ ಅವರು ರಾಯ್ಬರೇಲಿಯಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ, “ನಾವು ಪುರೋಹಿತ್ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ. ಎಲ್ಲಾ ಸಂಸ್ಕೃತ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿವೇತನವನ್ನು ನೀಡುತ್ತೇವೆ” ಎಂದು ಭರವಸೆ ನೀಡಿದ್ದರು.
ಬಿಜೆಪಿ ಲೋಕಕಲ್ಯಾಣ ಸಂಕಲ್ಪ ಪತ್ರದಲ್ಲಿ ಉಲ್ಲೇಖಿಸಿರುವ ಈ ಭರವಸೆಗಳನ್ನು ಈಡೇರಿಸಲು ಅವರು ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಇದಲ್ಲದೆ, ಮುಂದಿನ 100 ದಿನಗಳಲ್ಲಿ ಆನ್ಲೈನ್ ಸಮಗ್ರ ದೇವಾಲಯದ ಮಾಹಿತಿ ವ್ಯವಸ್ಥೆಯನ್ನು ರಚಿಸುವಂತೆಯೂ ಅವರು ನಿರ್ದೇಶನ ನೀಡಿದ್ದಾರೆ. ಇದು ಭಕ್ತರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ದೇವಸ್ಥಾನ, ಅದರ ಇತಿಹಾಸ, ಮಾರ್ಗ ನಕ್ಷೆ ಇತ್ಯಾದಿ ಮಾಹಿತಿಯನ್ನು ಒಳಗೊಂಡಿರುತ್ತದೆ. ಪ್ರಯಾಗ್ರಾಜ್, ಮಥುರಾ, ಗೋರಖ್ಪುರ ಮತ್ತು ವಾರಣಾಸಿ ಜಿಲ್ಲೆಗಳಲ್ಲಿ “ಭಜನ ಸಂಧ್ಯಾ ಸ್ಥಳಗಳು ಸಹ ಸಿದ್ಧಗೊಳ್ಳಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.