ನವದೆಹಲಿ: ಸಾರ್ವಜನಿಕ ಆಡಳಿತದಲ್ಲಿನ ಉತ್ಕೃಷ್ಟತೆಗಾಗಿ ಕೇಂದ್ರ ಸರ್ಕಾರ ನೀಡುವ ಪ್ರಶಸ್ತಿಗೆ ಕರ್ನಾಟಕದ ಸೇವ ಸಿಂಧು ಪೋರ್ಟಲ್ ಪಾತ್ರವಾಗಿದೆ. “ಅಡೆತಡೆಯಿಲ್ಲದೆ, ಮೊದಲಿನಿಂದ ಕೊನೆತನಕ ಮಾನವ ಮಧ್ಯಪ್ರವೇಶವಿಲ್ಲದ ಸೇವೆ ನೀಡಿಕೆ” ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.
ಸೇವಾ ಸಿಂಧು ಪೋರ್ಟಲ್ ಅನ್ನು ನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿ, ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ಸ್ ಸರ್ವೀಸಸ್ ನಿರ್ದೇಶಕಿ ದೀಪ್ತಿ ಆದಿತ್ಯ ಕಾನಡೆಯವರು ರಾಜ್ಯ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
PM @narendramodi confers award for Innovation State to Karnataka for 'Seamless End to End Delivery of Services Without Human Intervention'
The Seva Sindhu Portal provides citizens with a single point of access to a variety of government services pic.twitter.com/uGJkCPREcA
— PIB India (@PIB_India) April 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.