ಕಲಬುರಗಿ: ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು ಈಗಾಗಲೇ ಹೊರಡಿಸಲಾಗಿದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಇರಬೇಕು ಎಂದು ಕಾನೂನು ಇದೆ. ಡಿಜಿಯವರು ಸುತ್ತೋಲೆ ಹೊರಡಿಸಿದ್ದಾರೆ ಎಂದರು.
*ಪಕ್ಷದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ಇದೆ. ಪಕ್ಷದಲ್ಲಿ ಯಾವ ಅಸಮಾಧಾನವೂ ಇಲ್ಲ. ಕೆಲವು ವಿಚಾರಗಳನ್ನು ಚರ್ಚೆ ಮಾಡಿ ಬಗೆಹರಿಸಿಕೊಂಡಿದ್ದೇವೆ. ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ನಮ್ಮಲ್ಲಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ವಿಶ್ವಾಸವಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.