ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ಮಾರ್ಟ್ ಪೋಲೀಸಿಂಗ್ಗೆ ಎಲ್ಲಾ ರಾಜ್ಯಗಳ ಪೊಲೀಸ್ ವ್ಯವಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರ ಅಗತ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಭೋಪಾಲ್ನ ಕೇಂದ್ರ ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ಇಂದು ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆಯೋಜಿಸಿದ್ದ 48ನೇ ಅಖಿಲ ಭಾರತ ಪೊಲೀಸ್ ವಿಜ್ಞಾನ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದ ಶಾ, “ಜ್ಞಾನ ಆಧಾರಿತ, ಸಾಕ್ಷ್ಯಾಧಾರಿತ ಮತ್ತು ತರ್ಕಬದ್ಧ ಪೊಲೀಸ್ ವ್ಯವಸ್ಥೆಯ ಅಗತ್ಯವಿದೆ. ದೇಶ, ಆಗ ಮಾತ್ರ ಹೊಸ ಯುಗದ ಅಪರಾಧಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಬಹುದು.” ಎಂದಿದ್ದಾರೆ.
ಅಪರಾಧ ಜಗತ್ತಿಗೆ ಸೈಬರ್ ಕ್ರೈಂ, ಮಾದಕ ದ್ರವ್ಯದಂತಹ ಹೊಸ ಆಯಾಮಗಳು ಸೇರ್ಪಡೆಯಾಗಿದ್ದು, ಎಲ್ಲಾ ರಾಜ್ಯಗಳ ಪೊಲೀಸ್ ಸಿಬ್ಬಂದಿಯಲ್ಲಿ ಸಮನ್ವಯತೆ ಮತ್ತು ಏಕರೂಪತೆ ಇರಬೇಕು ಎಂದು ಕೇಂದ್ರ ಗೃಹ ಸಚಿವರು ಹೇಳಿದರು.
Inaugurated the FICCI Tech Expo at the 48th All India Police Science Congress today in CAPT Bhopal. pic.twitter.com/TFFwSx3fhh
— Amit Shah (@AmitShah) April 22, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.