ಬೆಂಗಳೂರು : ರಾಜ್ಯದಲ್ಲಿ ಐತಿಹಾಸಿಕ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ 24 ರಿಂದ ಮೇ 3 ರ ವರೆಗೆ ಕ್ರೀಡಾಕೂಟ ನಡೆಯಲಿದೆ ಎಂದು ಕ್ರೀಡಾ ಸಚಿವ ನಾರಾಯಣ ಗೌಡ ಹೇಳಿದರು.
ಏಪ್ರಿಲ್ 24 ರಂದು ನಡೆಯಲಿರುವ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಕೇಂದ್ರ ಸಚಿವ ಅನುರಾಗ್ ಠಾಕೂರ್, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದರು.
ಕ್ರೀಡಾಕೂಟದಲ್ಲಿ ದೇಶದ 200 ವಿಶ್ವವಿದ್ಯಾಲಯಗಳಿಂದ 4 ಸಾವಿರದ 500 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ರಾಜ್ಯದ 12 ವಿಶ್ವವಿದ್ಯಾಲಯದ 290ಕ್ಕೂ ಹೆಚ್ಚು ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಸಹ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.
ಉದ್ಘಾಟನಾ ಸಮಾರಂಭದಲ್ಲಿ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಕಾರ್ಯಕ್ರಮದ ಜೊತೆಗೆ ಲೇಸರ್ ಶೋ, ಅಕ್ರೋಬ್ಯಾಟಿಕ್ ಪ್ರದರ್ಶನ ಇರಲಿದೆ. ಮೇ 3ರಂದು ಜೈನ್ ಗ್ಲೋಬಲ್ ಕ್ಯಾಂಪಸ್ ನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Catch the live action 📺 of #KheloIndia University Games 2021 Participants on @ddsportschannel from 24th April 2022 to 3rd May 2022#KIUG2021@ianuragthakur @NisithPramanik @BSBommai @narayanagowdakc @dyesdept @JainDeemedtbUnv pic.twitter.com/YKIxXDUYyt
— Fit India Movement (@FitIndiaOff) April 22, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.