ಬೆಂಗಳೂರು: ಬೆಂಗಳೂರಿನಲ್ಲಿ ಧ್ವನಿವರ್ಧಕ ನಿಯಂತ್ರಣ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಕಳೆದ ಹದಿನೈದು ದಿನಗಳಲ್ಲಿ ಒಟ್ಟು 619 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್ ಜಾರಿ ಮಾಡಿದೆ.
ಮೂಲಗಳ ಪ್ರಕಾರ, ಪೊಲೀಸರು ಮಸೀದಿ, ದೇವಾಲಯ ಸೇರಿ ವಿವಿಧ ಧಾರ್ಮಿಕ ಕೇಂದ್ರಗಳಿಗೆ ನೋಟಿಸ್ ಜಾರಿ ಮಾಡಿ ಶಬ್ದಮಾಲಿನ್ಯಕ್ಕೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದಾರೆ.
15 ದಿನಗಳಲ್ಲಿ 193 ಮಸೀದಿಗಳು, 313 ಮಂದಿರಗಳು ಹಾಗೂ 26 ಚರ್ಚುಗಳಿಗೆ ನೋಟಿಸ್ ನೀಡಲಾಗಿದೆ. 2000ರಲ್ಲಿ ಸುಪ್ರೀಂಕೋರ್ಟ್ ಶಬ್ದ ಮಾಲಿನ್ಯದ ಕುರಿತು ನೀಡಿರುವ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ತಿಳಿಸಲಾಗಿದೆ.
ಪೊಲೀಸರ ಪ್ರಕಾರ ನಗರದಾದ್ಯಂತ ಮುನ್ನೂರಕ್ಕೂ ಅಧಿಕ ಧಾರ್ಮಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘನೆ ಆಗುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮೂಲಗಳ ಮೂಲಕ ದೂರು ನೀಡಿದ್ದರು. ಇದಕ್ಕೆ ಅನುಗುಣವಾಗಿ ನೋಟಿಸ್ ಜಾರಿಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.