ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಎರಡನೇ ಆವೃತ್ತಿ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಾಳೆಯಿಂದ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕ್ರೀಡಾ ಸಚಿವ ನಾರಾಯಣಗೌಡ, ಭಾನುವಾರ ಸಂಜೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದಿದ್ದಾರೆ.
ಜೈನ್ ಗ್ಲೋಬಲ್ ಕ್ಯಾಂಪಸ್ ನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ ಎಂದಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕಲಾಪ್ರಕಾರಗಳ ಪ್ರದರ್ಶನ ನಡೆಯಲಿದೆ.
ದೇಶಾದ್ಯಂತದ 200 ವಿಶ್ವವಿದ್ಯಾಲಯಗಳ ಸುಮಾರು 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗಲಿದ್ದಾರೆ. ಮನುಬಕರ್, ದ್ಯುತಿ ಚಂದ್ ಸೇರಿದಂತೆ ಹಲವು ಒಲಿಂಪಿಯನ್ಗಳು ಕೂಡ ಇದರಲ್ಲಿ ಭಾಗಿಯಾಗಲಿದ್ದಾರೆ.
ಕ್ರೀಡಾಕೂಟದ ಸ್ಮರಣಾರ್ಥ ಅಂಚೆ ಇಲಾಖೆಯು ವಿಶೇಷ ಅಂಚೆ ಲಕೋಟೆ ಯನ್ನು ಬಿಡುಗಡೆ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.