ನವದೆಹಲಿ: ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಭಾರತಕ್ಕೆ ಎಂಟು ದಿನಗಳ ಪ್ರವಾಸದಲ್ಲಿರುವ ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಶನಿವಾರ ನವದೆಹಲಿಯಲ್ಲಿ ಭೇಟಿ ಮಾಡಿದರು.
ಮಾರಿಷಸ್ ಪ್ರಧಾನಿ ಎಂಟು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಗುರುವಾರ, ಅವರು ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಸಭೆ ನಡೆಸಿದರು.
ಟ್ವಿಟ್ ಮಾಡಿರುವ ಮೋದಿ, “ನಾನು ಇಂದು ಬೆಳಿಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಸಭೆ ನಡೆಸಿದೆ, ನಾವು ಮಾರಿಷಸ್ ಮತ್ತು ಉತ್ತರ ಪ್ರದೇಶದ ನಡುವೆ ನಿಕಟವಾದ ಸಾಂಸ್ಕೃತಿಕ ಸಂಪರ್ಕಗಳು ಮತ್ತು ಸಹೋದರತ್ವದ ಸಂಬಂಧಗಳನ್ನು ಅಭಿವೃದ್ಧಿಪಡಿಸುವ ಮಾರ್ಗಗಳನ್ನು ಅನ್ವೇಷಿಸಿದ್ದೇವೆ” ಎಂದಿದ್ದಾರೆ.
ಇದಕ್ಕೂ ಮುನ್ನ ಬುಧವಾರ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ಪ್ರಧಾನಿ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಮಹಾನಿರ್ದೇಶಕ ಡಾ ಟೆಡ್ರೊಸ್ ಘೆಬ್ರೆಯೆಸಸ್ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.
ಜಾಗತಿಕ ಆಯುಷ್ ಶೃಂಗಸಭೆಯ ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ಮಾರಿಷಸ್ ಪ್ರಧಾನ ಮಂತ್ರಿಯೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು ಮತ್ತು ಪ್ರಸ್ತುತ ಅಭಿವೃದ್ಧಿ ಪಾಲುದಾರಿಕೆ ಮತ್ತು ರಕ್ಷಣೆಯಲ್ಲಿನ ಸಹಕಾರದ ಕುರಿತು ಚರ್ಚಿಸಿದರು.
ಪ್ರಧಾನಿ ಮೋದಿ ಮತ್ತು ಮಾರಿಷಸ್ ಪ್ರಧಾನಿ ಅವರು ಮೆಟ್ರೋ ಎಕ್ಸ್ಪ್ರೆಸ್ ಯೋಜನೆಯ ಪ್ರಗತಿ ಮತ್ತು ಮಾರಿಷಸ್ನಲ್ಲಿ ಆಯುಷ್ ಸೆಂಟರ್ ಆಫ್ ಎಕ್ಸಲೆನ್ಸ್ನ ಪ್ರಸ್ತಾವನೆಯನ್ನು ಪರಿಶೀಲಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.