ಬೆಂಗಳೂರು : ಐತಿಹಾಸಿಕ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಂತಿಮ ಹಂತದ ಸಿದ್ದತೆ ಪರಿಶೀಲಿಸಿದರು.
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಉಪ ರಾಷ್ಟ್ರಪತಿ ಶ್ರೀ ವೆಂಕಯ್ಯನಾಯ್ಡುರವರು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಸಚಿವ ಡಾ.ನಾರಾಯಣಗೌಡ ಅವರು ಖುದ್ದು ಹಾಜರಿದ್ದು, ಅಂತಿಮ ಹಂತದ ಸಿದ್ದತೆಗಳ ಮೇಲೆ ನಿಗಾವಹಿಸಿದ್ದಾರೆ. ನಾಳೆ ನಡೆಯಲಿರುವ ಕಾರ್ಯಕ್ರಮಗಳ ರಿಹರ್ಸಲ್ ವೀಕ್ಷಿಸಿದರು.
ಕರ್ನಾಟಕದ ಪಾಲಿಗೆ ಇದೊಂದು ಪ್ರತಿಷ್ಠೆ ಹಾಗೂ ಹೆಮ್ಮೆಯ ಕಾರ್ಯಕ್ರಮವಾಗಿದೆ. ಹಾಗಾಗಿ ಯಾವುದೇ ರೀತಿಯ ಲೋಪ ದೋಷಗಳಾಗದೇ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆದು ಯಶಸ್ವಿಯಾಗಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ, ಎಂಎಲ್ ಸಿ ಗೋವಿಂದರಾಜು, ಭಾರತೀಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.