ನವದೆಹಲಿ: ಭಾರತದಲ್ಲಿ ಡಿಜಿಟಲ್ ಪಾವತಿ ಸಂಸ್ಕೃತಿ ಬೆಳೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸಂತಸ ವ್ಯಕ್ತಪಡಿಸಿದ್ದಾರೆ.
ಆಲ್ ಇಂಡಿಯಾ ರೇಡಿಯೊದಲ್ಲಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕುಗ್ರಾಮ ಮತ್ತು ಸಣ್ಣ ಪಟ್ಟಣಗಳಲ್ಲಿಯೂ ಜನರು ಯುಪಿಐ ಮೂಲಕ ವಹಿವಾಟು ನಡೆಸುತ್ತಿರುವುದರಿಂದ ಯುಪಿಐ ವೇಗವಾಗಿ ದೇಶದ ಆರ್ಥಿಕತೆಯ ಭಾಗವಾಗಿದೆ. ದೇಶದಲ್ಲಿ ಪ್ರತಿದಿನ 20 ಸಾವಿರ ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆಯುತ್ತಿದೆ ಎಂದು ಹೇಳಿದರು.
ಮಾರ್ಚ್ನಲ್ಲಿ ಯುಪಿಐ ವಹಿವಾಟು ಸುಮಾರು 10 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದಿದ್ದಾರೆ.
ಫಿನ್-ಟೆಕ್ಗೆ ಸಂಬಂಧಿಸಿದ ಅನೇಕ ಹೊಸ ಸ್ಟಾರ್ಟ್ಅಪ್ಗಳು ಸಹ ದೇಶದಲ್ಲಿ ಬರುತ್ತಿವೆ ಎಂದಿದ್ದಾರೆ.
ತಂತ್ರಜ್ಞಾನವು ಸಾಮಾನ್ಯ ಜನರ ಜೀವನವನ್ನು ಬದಲಾಯಿಸುತ್ತಿದೆ. ತಂತ್ರಜ್ಞಾನವು ದಿವ್ಯಾಂಗರಿಗೆ ಜೀವನವನ್ನು ಸುಲಭಗೊಳಿಸಿದೆ ಮತ್ತು ಅವರು ಹೊಸ ಎತ್ತರವನ್ನು ತಲುಪಲು ಅನುವು ಮಾಡಿಕೊಟ್ಟಿದೆ ಎಂದು ಅವರು ಹೇಳಿದರು.
ವಿಕಲಚೇತನರಿಗೆ ಸಂಪನ್ಮೂಲಗಳು ಮತ್ತು ಮೂಲಸೌಕರ್ಯಗಳು ಲಭ್ಯವಾಗುವಂತೆ ಮಾಡಲು ಸರ್ಕಾರ ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಿದೆ . ಈ ನಿಟ್ಟಿನಲ್ಲಿ ಸ್ಫೂರ್ತಿದಾಯಕ ಕೆಲಸ ಮಾಡುತ್ತಿರುವ ಅನೇಕ ಸ್ಟಾರ್ಟ್ಅಪ್ಗಳು ಮತ್ತು ಸಂಸ್ಥೆಗಳಿವೆ ಎಂದು ಮೋದಿ ಹೇಳಿದರು. ಅವರು ಅಂತಹ ಒಂದು ಸಂಸ್ಥೆಯನ್ನು ಉಲ್ಲೇಖಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.