ನವದೆಹಲಿ: ಫ್ರಾನ್ಸ್ ಅಧ್ಯಕ್ಷರಾಗಿ ಪುನರಾಯ್ಕೆಯಾಗಿರುವ ಇಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ ಟ್ವಿಟರ್ ಮೂಲಕ ಅಭಿನಂದಿಸಿದ್ದಾರೆ.
“ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ನನ್ನ ಸ್ನೇಹಿತ ಇಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಅಭಿನಂದನೆಗಳು! ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
ಭಾನುವಾರ ಫ್ರಾನ್ಸ್ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಬಲಪಂಥೀಯ ಪ್ರತಿಸ್ಪರ್ಧಿ ಮರೀನ್ ಲೆ ಪೆನ್ ಅವರನ್ನು ಸಲೀಸಾಗಿ ಸೋಲಿಸಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು.
ಶೇ.97 ರಷ್ಟು ಮತಗಳನ್ನು ಎಣಿಕೆ ಮಾಡಲಾಗಿದ್ದು, ಮ್ಯಾಕ್ರೋನ್ ಅವರು 57.4 ಶೇಕಡಾ ಮತಗಳನ್ನು ಗಳಿಸುವ ಹಾದಿಯಲ್ಲಿದ್ದಾರೆ ಎಂದು ಆಂತರಿಕ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ.
ತಮ್ಮ ವಿಜಯದ ಭಾಷಣದಲ್ಲಿ, “ಈ ದೇಶದ ಅನೇಕರು ನನಗೆ ಮತ ಹಾಕಿದ್ದಾರೆ ಅವರು ನನ್ನ ಆಲೋಚನೆಗಳನ್ನು ಬೆಂಬಲಿಸುವ ಕಾರಣದಿಂದಲ್ಲ, ಆದರೆ ಬಲಪಂಥೀಯರನ್ನು ದೂರವಿಡಲು. ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ಮುಂಬರುವ ವರ್ಷಗಳಲ್ಲಿ ನಾನು ಅವರಿಗೆ ಋಣಿಯಾಗಲು ಬಯಸುತ್ತೇನೆ. . ಫ್ರಾನ್ಸ್ನಲ್ಲಿ ಯಾರೂ ದಾರಿತಪ್ಪಲು ಬಿಡುವುದಿಲ್ಲ” ಎಂದಿದ್ದಾರೆ.
Congratulations to my friend @EmmanuelMacron on being re-elected as the President of France! I look forward to continue working together to deepen the India-France Strategic Partnership.
— Narendra Modi (@narendramodi) April 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.