ನವದೆಹಲಿ: ಏಷ್ಯಾದ ಅತಿದೊಡ್ಡ ಅಂತಾರಾಷ್ಟ್ರೀಯ ಆಹಾರ ಮತ್ತು ಆತಿಥ್ಯ ಉತ್ಸವ ಆಹಾರ್-2022 ನವ ದೆಹಲಿಯ ಪ್ರಗತಿ ಮೈದಾನದಲ್ಲಿ ಇಂದಿನಿಂದ ಆರಂಭವಾಗಲಿದೆ.
ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ (APEDA)ಯು ಭಾರತ ವ್ಯಾಪಾರ ಪ್ರಚಾರ ಸಂಸ್ಥೆ (ITPO) ಸಹಯೋಗದೊಂದಿಗೆ ಏಷ್ಯಾದ ಅತಿದೊಡ್ಡ ಅಂತಾರಾಷ್ಟ್ರೀಯ ಆಹಾರ ಮತ್ತು ಆತಿಥ್ಯ ಮೇಳ AAHAR-2022 ಅನ್ನು ನವದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸುತ್ತಿದೆ. ಇಂದಿನಿಂದ ಉತ್ಸವ ಆರಂಭವಾಗಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ.
ಭೌಗೋಳಿಕ ಸೂಚನಾ ಉತ್ಪನ್ನಗಳು, ಸಂಸ್ಕರಿಸಿದ ಆಹಾರ, ಸಾವಯವ ಮತ್ತು ಘನೀಕೃತ ಆಹಾರ ಉತ್ಪನ್ನಗಳನ್ನು ಒಳಗೊಂಡಿರುವ ಕೃಷಿ ಉತ್ಪನ್ನಗಳ ವಿವಿಧ ವಿಭಾಗಗಳಿಂದ 80 ಕ್ಕೂ ಹೆಚ್ಚು ರಫ್ತುದಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ.
ಈಶಾನ್ಯ ಪ್ರದೇಶ ಮತ್ತು ಹಿಮಾಲಯನ್ ರಾಜ್ಯಗಳಾದ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ರಫ್ತುದಾರರು, ಮಹಿಳಾ ಉದ್ಯಮಿಗಳು, ರೈತ ಉತ್ಪಾದಕರ ಸಂಸ್ಥೆಗಳು, ಸ್ಟಾರ್ಟ್-ಅಪ್ಗಳು ಮತ್ತು ರಾಗಿ ರಫ್ತುದಾರರಿಗೆ ಮೀಸಲಾದ ಸ್ಟಾಲ್ಗಳನ್ನು APEDA ರಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.