ನವದೆಹಲಿ: ಟ್ವಿಟರ್ ತನ್ನ ಸಾಮಾಜಿಕ ಮಾಧ್ಯಮ ಕಂಪನಿಯನ್ನು ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್ಗೆ 44 ಬಿಲಿಯನ್ ಡಾಲರ್ ಒಪ್ಪಂದದಲ್ಲಿ ಮಾರಾಟ ಮಾಡುವುದಾಗಿ ಘೋಷಿಸಿದೆ.
ಟ್ವಿಟರ್ ಅನ್ನು ಖರೀದಿಸುವ ಬಿಲಿಯನೇರ್ ಎಲೋನ್ ಮಸ್ಕ್ ಅವರ ಪ್ರಸ್ತಾಪವನ್ನು ಟ್ವಿಟರ್ ಮಂಡಳಿಯು ಒಪ್ಪಿಕೊಂಡಿದೆ ಎಂದು ಕಂಪನಿ ಹೇಳಿದೆ.
44 ಬಿಲಿಯನ್ ಡಾಲರ್ ಮೊತ್ತಕ್ಕೆ ಎಲೋನ್ ಮಸ್ಕ್ ಅವರು ಟ್ವಿಟರ್ ಕಂಪನಿಯ ಸಂಪೂರ್ಣ ಷೇರು ಅನ್ನು ತನ್ನದಾಗಿಸಿಕೊಂಡಿದ್ದಾರೆ.
ಟ್ವಿಟರ್ ನ ಪ್ರತಿ ಷೇರಿಗೆ 54.20 ಡಾಲರ್ ನೀಡಿ ಪೂರ್ತಿ ಷೇರು ಖರೀದಿಸುವ ಎಲೋನ್ ಮಸ್ಕ್ ಪ್ರಸ್ತಾಪವನ್ನು ಸ್ವೀಕರಿಸಿರುವುದಾಗಿ ಟ್ವಿಟರ್ ಮಂಡಳಿ ಒಪ್ಪಿಕೊಂಡಿದೆ. ಈ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ವ್ಯಾಪಾರ ಒಪ್ಪಂದಕ್ಕೆ ಅಂತಿಮ ಮುದ್ರೆ ಬಿದ್ದಿದೆ.
ಒಪ್ಪಂದದ ನಿಯಮಗಳ ಅಡಿಯಲ್ಲಿ, ಷೇರುದಾರರು ತಮ್ಮ ಮಾಲೀಕತ್ವದ ಟ್ವಿಟರ್ ಸ್ಟಾಕ್ನ ಪ್ರತಿ ಷೇರಿಗೆ 54.20 ಡಾಲರ್ ಹಣವನ್ನು ಸ್ವೀಕರಿಸುತ್ತಾರೆ.
ಟ್ವಿಟರ್ನ ಪ್ರಸ್ತುತ ಸಿಇಒ ಪರಾಗ್ ಅಗರವಾಲ್ ಅವರು, ಟ್ವಿಟರ್ ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರುವ ಉದ್ದೇಶ ಮತ್ತು ಪ್ರಸ್ತುತತೆಯನ್ನು ಹೊಂದಿದೆ. ನಮ್ಮ ತಂಡಗಳ ಬಗ್ಗೆ ನನಗೆ ಹೆಮ್ಮೆ ಇದೆ ಮತ್ತು ಈ ಕೆಲಸದಿಂದ ಸ್ಫೂರ್ತಿ ಪಡೆದಿದ್ದೇನೆ ಎಂದಿದ್ದಾರೆ.
ಮಸ್ಕ್ ಅವರು ಟ್ವಿಟರ್ ಸಿಇಓ ಸ್ಥಾನದಿಂದ ಅಗರ್ವಾಲ್ ಅವರನ್ನು ತೆಗೆದು ಹಾಕಿದರೆ ಅವರಿಗೆ 42 ಮಿಲಿಯನ್ ಡಾಲರ್ ಹಣವನ್ನು ಪರಿಹಾರವಾಗಿ ನೀಡಬೇಕಾಗುತ್ತದೆ.
ಟ್ವಿಟರ್ನ ಮಂಡಳಿಯು ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟ ಒಪ್ಪಂದವು ಈ ವರ್ಷ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಒಪ್ಪಂದದ ಅಡಿಯಲ್ಲಿ, ಟ್ವಿಟರ್ ಷೇರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಅಲ್ಲದೇ ಟ್ವಿಟರ್ ಖಾಸಗಿ ಸಂಸ್ಥೆಯಾಗಿ ರೂಪುಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.