ನವದೆಹಲಿ: ಕಳೆದ ಎರಡು ವಾರಗಳಿಂದ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಪ್ರಧಾನ ಮಂತ್ರಿ ಕಚೇರಿ (PMO) ಪ್ರಕಾರ, ವರ್ಚುವಲ್ ಸಭೆಯು ಬುಧವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಪ್ರಧಾನ ಮಂತ್ರಿ ಮತ್ತು ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆಯಾ ಸಚಿವಾಲಯಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಪ್ರಸ್ತುತ ಕೋವಿಡ್ ಪರಿಸ್ಥಿತಿ, ವ್ಯಾಕ್ಸಿನೇಷನ್ ಪ್ರಮಾಣ, ವಿಶೇಷವಾಗಿ ಬೂಸ್ಟರ್ ಡೋಸ್ ಅಭಿಯಾನ ಮತ್ತು ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಸ್ಥಿತಿಗತಿ ಕುರಿತು ಪ್ರಸ್ತುತಿಯನ್ನು ನೀಡಲಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,483 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬುಲೆಟಿನ್ ಪ್ರಕಾರ, ಸಕ್ರಿಯ ಪ್ರಕರಣ 15,636 ಆಗಿದ್ದರೆ, ಪಾಸಿಟಿವ್ ದರವು ಶೇಕಡಾ 0.55 ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.