ಲಕ್ನೋ: ದೇಶದಲ್ಲಿ ಧ್ವನಿವರ್ಧಕ ನಿಷೇಧದ ಕುರಿತು ನಡೆಯುತ್ತಿರುವ ವಿವಾದದ ನಡುವೆ, ಉತ್ತರ ಪ್ರದೇಶ ಸರ್ಕಾರವು ರಾಜ್ಯದ ಎಲ್ಲಾ ಧಾರ್ಮಿಕ ಸ್ಥಳಗಳಿಂದ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲು ಆದೇಶಿಸಿದೆ ಮತ್ತು ಶಬ್ದ ಮಾಲಿನ್ಯದ ವಿಷಯದ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ನಿರ್ಧರಿಸಿದೆ.
ಸಮೀಪದಲ್ಲಿ ವಾಸಿಸುವ ಜನರಿಗೆ ತೊಂದರೆಯಾಗದಂತೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು ನಿರ್ಬಂಧಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಈ ಕುರಿತು ಮಾಹಿತಿ ನೀಡಿದ ಹೆಚ್ಚುವರಿ ಮುಖ್ಯ ಗೃಹ ಕಾರ್ಯದರ್ಶಿ ಅವನೀಶ್ ಅವಸ್ಥಿ, “ರಾಜ್ಯದ ಧಾರ್ಮಿಕ ಸ್ಥಳಗಳಿಂದ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲು ಶನಿವಾರ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಏಪ್ರಿಲ್ನೊಳಗೆ ಅನುಸರಣೆ ವರದಿಯನ್ನು ಜಿಲ್ಲೆಗಳಿಂದ ಕೇಳಲಾಗಿದೆ. ಜೊತೆಗೆ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಲು ಮತ್ತು ಸರಿಯಾದ ಸಮನ್ವಯದ ಮೂಲಕ ಅನಧಿಕೃತ ಧ್ವನಿವರ್ಧಕಗಳನ್ನು ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ” ಎಂದಿದ್ದಾರೆ.
ನ್ಯಾಯಾಲಯ ಮತ್ತು ಸರ್ಕಾರದ ಆದೇಶವನ್ನು ಅನುಸರಿಸಿ, ಶಬ್ದ ಮಾಲಿನ್ಯದ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಲಾಗುತ್ತಿದೆ. ಈ ಮಾಹಿತಿಯನ್ನು ಎಲ್ಲಾ ದೇವಾಲಯಗಳು, ಮಸೀದಿಗಳು, ಗುರುದ್ವಾರಗಳು, ಚರ್ಚ್ಗಳು ಮತ್ತು ಮದುವೆ ಮಂಟಪಗಳಿಗೆ ನೀಡಲಾಗುತ್ತಿದೆ ಮತ್ತು ಜನರಿಗೆ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಲು ಕೇಳಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.