ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 2-4 ರವರೆಗೆ ಮೂರು ಯುರೋಪಿಯನ್ ರಾಷ್ಟ್ರಗಳಾದ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ಗೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬುಧವಾರ ತಿಳಿಸಿದೆ.
2022ರಲ್ಲಿ ಪ್ರಧಾನಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಬರ್ಲಿನ್ನಲ್ಲಿ, ಪ್ರಧಾನ ಮಂತ್ರಿಗಳು ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ ಮತ್ತು ಉಭಯ ನಾಯಕರು ಭಾರತ-ಜರ್ಮನಿ ಅಂತರ-ಸರ್ಕಾರಿ ಸಮಾಲೋಚನೆಗಳ (ಐಜಿಸಿ) ಆರನೇ ಆವೃತ್ತಿಯ ಸಹ-ಅಧ್ಯಕ್ಷತೆ ವಹಿಸಲಿದ್ದಾರೆ.
ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿ ಮತ್ತು ಚಾನ್ಸೆಲರ್ ಸ್ಕೋಲ್ಜ್ ಅವರು ಜಂಟಿಯಾಗಿ ವ್ಯಾಪಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಮಂತ್ರಿಯವರು ಜರ್ಮನಿಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಸಂವಾದ ನಡೆಸಲಿದ್ದಾರೆ.
ನಂತರ ಡೆನ್ಮಾರ್ಕ್ನ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಕೋಪನ್ಹೇಗನ್ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಡೆನ್ಮಾರ್ಕ್ ಆಯೋಜಿಸುತ್ತಿರುವ 2 ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.
ಮೇ 4 ರಂದು ಪ್ರಧಾನಿ ಪ್ಯಾರಿಸ್ಗೆ ಭೇಟಿ ನೀಡಲಿದ್ದಾರೆ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿಯಾಗಲಿದ್ದಾರೆ. ಭಾರತ ಮತ್ತು ಫ್ರಾನ್ಸ್ ಈ ವರ್ಷ ತಮ್ಮ ರಾಜತಾಂತ್ರಿಕ ಸಂಬಂಧಗಳ 75 ನೇ ವರ್ಷವನ್ನು ಆಚರಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.