ನವದೆಹಲಿ: ರಾಜ್ಯಗಳಿಗೆ ಜಿಎಸ್ಟಿ ಪರಿಹಾರವಾಗಿ 2 ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರ ಬಿಡುಗಡೆ ಮಾಡಿದ್ದು, ಈ ಮೂಲಕ 2020-21ರ ಹಣಕಾಸು ವರ್ಷಕ್ಕೆ ಯಾವುದೇ ಪಾವತಿಗಳು ಬಾಕಿ ಉಳಿದಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ.
2020-21ನೇ ಹಣಕಾಸು ವರ್ಷಕ್ಕೆ ರಾಜ್ಯಗಳಿಗೆ ಜಿಎಸ್ಟಿ ಪರಿಹಾರಕ್ಕಾಗಿ 2 ಲಕ್ಷ 78 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಮತ್ತು ಈ ವರ್ಷದಲ್ಲಿ ಯಾವುದೇ ಪಾವತಿ ಬಾಕಿ ಉಳಿದಿಲ್ಲ. ಬ್ಯಾಕ್-ಟು-ಬ್ಯಾಕ್ ಆಧಾರದ ಮೇಲೆ ಬಿಡುಗಡೆಯಾದ ನೆರವು ಸೇರಿದಂತೆ ರಾಜ್ಯಗಳಿಗೆ ಇದುವರೆಗೆ 7 ಲಕ್ಷ 35 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಯಾವುದೇ ಹಣಕಾಸು ವರ್ಷದ ಏಪ್ರಿಲ್ನಿಂದ ಜನವರಿವರೆಗಿನ ಹತ್ತು ತಿಂಗಳ ಪರಿಹಾರವನ್ನು ಆ ವರ್ಷದಲ್ಲಿ ಬಿಡುಗಡೆ ಮಾಡಲಾಗುತ್ತದೆ ಮತ್ತು ಫೆಬ್ರವರಿ ಮತ್ತು ಮಾರ್ಚ್ನ ಪರಿಹಾರವನ್ನು ಮುಂದಿನ ಹಣಕಾಸು ವರ್ಷದಲ್ಲಿ ಮಾತ್ರ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವಾಲಯ ಹೇಳಿದೆ.
2021-22ರ ಹತ್ತರಲ್ಲಿ ಎಂಟು ತಿಂಗಳ ಜಿಎಸ್ಟಿ ಪರಿಹಾರವನ್ನು ಈಗಾಗಲೇ ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ ಮತ್ತು ಸೆಸ್ನಿಂದ ಪರಿಹಾರ ನಿಧಿಯಲ್ಲಿ ಸಂಗ್ರಹವಾದಾಗ ಬಾಕಿಯಿರುವ ಮೊತ್ತವನ್ನು ಸಹ ಬಿಡುಗಡೆ ಮಾಡಲಾಗುತ್ತದೆ ಎಂದು ಅದು ಹೇಳಿದೆ.
ಜಿಎಸ್ಟಿಯನ್ನು ಪರಿಚಯಿಸುವುದರಿಂದ ರಾಜ್ಯಗಳಿಗೆ ಆಗುವ ಆದಾಯದ ನಷ್ಟವನ್ನು ಸರಿದೂಗಿಸಲು ಐದು ವರ್ಷಗಳ ಅವಧಿಗೆ ರಾಜ್ಯಗಳಿಗೆ ಪರಿಹಾರವನ್ನು ಕಾನೂನಿನ ಮೂಲಕ ಕೇಂದ್ರ ನೀಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.