ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವರ್ಷ ಇದುವರೆಗೆ 62 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ, ಅದರಲ್ಲಿ 47 ಸ್ಥಳೀಯ ಭಯೋತ್ಪಾದಕರು ಮತ್ತು 15 ವಿದೇಶಿ ಭಯೋತ್ಪಾದಕರು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ.
ಕಾಶ್ಮೀರದ ಇನ್ಸ್ಪೆಕ್ಟರ್-ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್ ಅವರು ವಿವರಗಳನ್ನು ನೀಡಿದ್ದು, ಈ ವರ್ಷ ಇಲ್ಲಿಯವರೆಗೆ ಕೊಲ್ಲಲ್ಪಟ್ಟವರಲ್ಲಿ 39 ಜನರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಿರಂತರವಾಗಿ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಹಲವಾರು ಭಯೋತ್ಪಾದಕರನ್ನು ಕೊಂದು ಹಾಕಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲೂ ದುಷ್ಕೃತ್ಯ ಎಸಗಲು ಭಯೋತ್ಪಾದಕರು ಸಂಚು ರೂಪಿಸಿದ್ದರು. ಆದರೆ ಈ ಸಂಚನ್ನು ವಿಫಲಗೊಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಭೇಟಿ ನೀಡಿದ್ದ ವೇಳೆ ಮೋದಿ ಅವರು ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.