ಬೆಂಗಳೂರು: ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.
2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದರು.
ಹಿಂದಿ ಭಾಷೆಯ ಬಗ್ಗೆ ಪಕ್ಷದ ನಿಲುವೇನು ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಸ್ಪಷ್ಟವಾಗಿ ತಿಳಿಸಲಾಗಿದೆ, ಭಾಷಾವಾರು ಪ್ರಾಂತ್ಯಗಳಾದ ಮೇಲೆ ಪ್ರಾದೇಶಿಕತೆಗೆ ಮಹತ್ವ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ , ಬೇರಾವುದೇ ಭಾಷೆ ಅಲ್ಲ ಎಂದರು.
ಪ್ರಾಧ್ಯಾಪಕರ ನೇಮಕಾತಿ, ಪಿಎಸ್ ಐ ಪರೀಕ್ಷೆ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಪಿಎಸ್ಐ ಪರೀಕ್ಷೆ ಅಕ್ರಮದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ, ಈಗ ಸಿಐಡಿಗೆ ವಹಿಸಲಾಗಿದೆ. ಹಗರಣದ ಮೂಲಕ್ಕೆ ತಲುಪಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪರೀಕ್ಷಾ ಹಗರಣಗಳು ಸರ್ಕಾರದ ವರ್ಚಿಸ್ಸಿಗೆ ಧಕ್ಕೆಯಾಗುವುದಿಲ್ಲವೇ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಇಲ್ಲಿ ಸರ್ಕಾರದ ಪ್ರಶ್ನೆ ಬರುವುದಿಲ್ಲ. ಯುಪಿಎಸ್ಸಿ ಪರೀಕ್ಷಾ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸರ್ಕಾರವೇ ಕಂಡುಹಿಡಿದು ತನಿಖೆ ನಡೆಸುತ್ತಿದೆ. ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯಬೇಕು. ಯಾವುದೇ ಅವ್ಯವಹಾರ ನಡೆದಿದ್ದರೂ ಅದನ್ನು ಸದೆಬಡಿಯಲಾಗುವುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.