News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ವಯಂಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ

modi-rss

ನವದೆಹಲಿ : ನಾನೊಬ್ಬ ಸ್ವಯಂಸೇವಕ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆಯಾಗುತ್ತದೆ. ಆರ್. ಎಸ್. ಎಸ್.ನಲ್ಲಿ ನನಗೆ ದೊರೆತ ಸಂಸ್ಕಾರದಿಂದಲೇ ನಾನು ಇಂದು ಭಾರತ ದೇಶದ ಪ್ರಧಾನಿಯಾಗಿದ್ದೇನೆ ಹಾಗೂ ದೇಶದ ಅಭಿವೃದ್ಧಿಗೆ ಆರ್. ಎಸ್. ಎಸ್. ನೀಡುವ ಸಲಹೆಗಳನ್ನು ನಾನು ಸ್ವೀಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮೂರು ದಿನಗಳ ಕಾಲ ನಡೆದ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಮನ್ವಯ ಬ್ಶೆಠಕ್‌ನಲ್ಲಿ ಭಾಗವಹಿಸಿದ್ದ ಮೋದಿಯವರು ಸುಮಾರು 15 ನಿಮಿಷಗಳ ಕಾಲ ಮಾತನಾಡಿದರು.

ದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಸಿದ್ಧವಿದ್ದು, ಕೇಂದ್ರ ಸರ್ಕಾರ ದೇಶದ ಹಿತದೃಷ್ಟಿಯಿಂದ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಶೀಘ್ರದಲ್ಲೇ ಕೆಲ ಪ್ರಮುಖ ಯೋಜನೆಗಳು ಅನುಷ್ಠಾನಕ್ಕೆ ಬರಲಿವೆ, ದೇಶಕ್ಕೆ ಒಳ್ಳೇ ದಿನಗಳು ಬರಲಿವೆ ಎಂದು ಹೇಳಿದ್ದಾರೆ.

ಮೋದಿ ಸರ್ಕಾರವನ್ನು ಆರ್‌ಎಸ್‌ಎಸ್ ನಿಯಂತ್ರಿಸುತ್ತಿದೆ ಎಂಬ ಆರೋಪಗಳನ್ನು ಆರ್‌ಎಸ್‌ಎಸ್ ತಳ್ಳಿಹಾಕಿದೆ. ಮೂಲತಃ ಸಂಘದ ಸ್ವಯಂಸೇವಕರಾಗಿರುವ ಸಚಿವರೊಂದಿಗೆ ಬ್ಶೆಠಕ್‌ನಲ್ಲಿ ಕೆಲವು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ.. ಬ್ಶೆಠಕ್‌ನ್ನು ನಾವು ಕದ್ದು ಮುಚ್ಚಿ ನಡೆಸಿಲ್ಲ, ಇದರಲ್ಲಿ ಗುಟ್ಟಿನ ವಿಷಯಗಳೇನಿಲ್ಲ ಎಂದು ಆರ್‌ಎಸ್‌ಎಸ್ ಹೇಳಿಕೆ ನೀಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top