ಲಕ್ನೋ: ಉತ್ತರ ಪ್ರದೇಶದ ವಿವಿಧ ಧಾರ್ಮಿಕ ಸ್ಥಳಗಳಿಂದ ಇದುವರೆಗೆ 45,773 ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, “ರಾಜ್ಯದಾದ್ಯಂತ ವಿವಿಧ ಧಾರ್ಮಿಕ ಸ್ಥಳಗಳಿಂದ ಇದುವರೆಗೆ 45,773 ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ ಮತ್ತು 58,861 ಧ್ವನಿವರ್ಧಕಗಳ ಧ್ವನಿ ಮಟ್ಟವನ್ನು ಕಡಿಮೆ ಮಾಡಿ ಪ್ರಮಾಣಿತ ನಿಯತಾಂಕಗಳ ಮಟ್ಟಕ್ಕೆ ಇಳಿಸಲಾಗಿದೆ” ಎಂದಿದ್ದಾರೆ.
ಧಾರ್ಮಿಕ ಸ್ಥಳಗಳಿಂದ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲು ಉತ್ತರ ಪ್ರದೇಶ ಸರ್ಕಾರ ಆದೇಶಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ತಿಂಗಳ ಆರಂಭದಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಧ್ವನಿಯನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡಿದ್ದರು.
”ರಾಜ್ಯದ ಧಾರ್ಮಿಕ ಸ್ಥಳಗಳಿಂದ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಶನಿವಾರ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಏಪ್ರಿಲ್ 30 ರೊಳಗೆ ಅನುಸರಣೆ ವರದಿಯನ್ನು ಜಿಲ್ಲೆಗಳಿಂದ ಕೋರಲಾಗಿದೆ” ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನೀಶ್ ಅವಸ್ತಿ ತಿಳಿಸಿದ್ದಾರೆ.
“ಧಾರ್ಮಿಕ ಮುಖಂಡರೊಂದಿಗೆ ಸಂಭಾಷಣೆಗಳನ್ನು ನಡೆಸಲು ಮತ್ತು ಅವರೊಂದಿಗೆ ಸಮನ್ವಯ ಸಾಧಿಸುವ ಮೂಲಕ ಅನಧಿಕೃತ ಧ್ವನಿವರ್ಧಕಗಳನ್ನು ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ” ಎಂದು ಅವಸ್ತಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.