ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನವನ್ನು ಉದ್ಘಾಟಿಸಿದರು.
ಸಮ್ಮೇಳನದಲ್ಲಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಗೆ ಉತ್ತೇಜನ ನೀಡಬೇಕು ಮತ್ತು ಇದು ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುತ್ತದೆ, ಅವರು ಹೆಚ್ಚು ಸಂಪರ್ಕ ಹೊಂದುವಂತೆ ಮಾಡುತ್ತದೆ ಎಂದಿದ್ದಾರೆ.
“ನಾವು ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕಾಗಿದೆ. ಇದು ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಅವರು ಅದರೊಂದಿಗೆ ಹೆಚ್ಚು ಸಂಪರ್ಕ ಹೊಂದುತ್ತಾರೆ ಎಂದಿದ್ದಾರೆ.
ನಮ್ಮ ಸರ್ಕಾರವು 1,450 ಅಪ್ರಸ್ತುತ ಕಾನೂನುಗಳನ್ನು ರದ್ದುಗೊಳಿಸಿದೆ, ರಾಜ್ಯಗಳು 75 ಕಾನೂನುಗಳನ್ನು ರದ್ದುಗೊಳಿಸಿವೆ ಎಂದು ತಿಳಿಸಿದರು.
ಭಾರತವು ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ, ನ್ಯಾಯವು ಸುಲಭವಾಗಿ, ತ್ವರಿತವಾಗಿ ದೊರೆಯುವಂತೆ ಮತ್ತು ಎಲ್ಲರಿಗೂ ನ್ಯಾಯಾಂಗ ವ್ಯವಸ್ಥೆಯನ್ನು ರಚಿಸುವತ್ತ ಗಮನಹರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
In 2015, we identified about 1800 laws that had become irrelevant. Out of these, the Centre abolished 1450 such laws. But, only 75 laws have been abolished by the States: PM Modi pic.twitter.com/1fZzpYwfib
— ANI (@ANI) April 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.