ನವದೆಹಲಿ: ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ʼವಿಕ್ರಾಂತ್ʼ ಅನ್ನು ಮೇ ತಿಂಗಳಲ್ಲಿ ಭಾರತೀಯ ನೌಕಾಪಡೆಗೆ ಹಸ್ತಾಂತರಿಸಲಾಗುವುದು ಎಂದು ವರದಿಗಳು ತಿಳಿಸಿವೆ.
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ನಿರ್ಮಿಸಿದ ವಿಮಾನವಾಹಕ ನೌಕೆಯನ್ನು ಭಾರತೀಯ ನೌಕಾಪಡೆಗೆ ಹಸ್ತಾಂತರಿಸಿದ ನಂತರ “ಐಎನ್ಎಸ್ ವಿಕ್ರಾಂತ್” ಎಂದು ಹೆಸರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಕೇರಳದ ಕೊಚ್ಚಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಎಸ್ಎಲ್ ನಿರ್ದೇಶಕ (ತಾಂತ್ರಿಕ) ಬೆಜಾಯ್ ಭಾಸ್ಕರ್, ಮುಂದಿನ ಕೆಲವು ವಾರಗಳಲ್ಲಿ ವಿಮಾನವಾಹಕ ನೌಕೆಯ ಅಂತಿಮ ಸಮುದ್ರ ಪ್ರಯೋಗವನ್ನು ನಡೆಸಲಾಗುವುದು ಎಂದು ಘೋಷಿಸಿದರು.
ಈ ವರ್ಷದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನದಂದು ಸ್ವದೇಶಿ ವಿಮಾನವಾಹಕ ನೌಕೆ (ಐಎಸಿ) ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದರು.
ವಿಮಾನವಾಹಕ ನೌಕೆಯ ಸುಮಾರು 60 ಪ್ರತಿಶತ ಭಾಗಗಳು ಸ್ಥಳೀಯವಾಗಿದ್ದು, ಉಳಿದ 40 ಪ್ರತಿಶತವನ್ನು ಆಮದು ಮಾಡಿಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.