ನವದೆಹಲಿ: ಮೂರು ಯುರೋಪಿಯನ್ ರಾಷ್ಟ್ರಗಳಿಗೆ ಪ್ರವಾಸ ಹೊರಟಿರುವ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ರಾಜಧಾನಿ ಬರ್ಲಿನ್ಗೆ ತಲುಪಿದ್ದಾರೆ. ಇಲ್ಲಿಗೆ ಬಂದಿಳಿದ ಅವರಿಗೆ ಭಾರತೀಯ ವಲಸಿಗರಿಂದ ಆತ್ಮೀಯ ಸ್ವಾಗತ ದೊರೆತಿದೆ. ಅದ್ಭುತ ಹಾಡನ್ನು ಹಾಡಿದ್ದಕ್ಕಾಗಿ ಅವರು ಚಿಕ್ಕ ಹುಡುಗನನ್ನು ಅಭಿನಂದಿಸಿದ್ದಾರೆ. ಅಲ್ಲದೇ ತನ್ನ ವರ್ಣಚಿತ್ರವನ್ನು ಬಿಡಿಸಿದ ಯುವತಿಯನ್ನು ಕೂಡ ಅವರು ಭೇಟಿಯಾಗಿದ್ದಾರೆ.
ನಂತರ ಟ್ವೀಟ್ ಮಾಡಿರುವ ಅವರು, ಭಾರತೀಯ ಸಮುದಾಯದೊಂದಿಗೆ ಸಂಪರ್ಕ ಸಾಧಿಸುವುದು ನಿಜಕ್ಕೂ ಅದ್ಭುತ ಮತ್ತು ಭಾರತವು ತನ್ನ ವಲಸೆಗಾರರ ಸಾಧನೆಗಳ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಇಂದು ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲಿನ ಉದ್ಯಮ ಮುಖಂಡರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭೇಟಿಯು ಭಾರತ ಮತ್ತು ಜರ್ಮನಿ ನಡುವಿನ ಸ್ನೇಹವನ್ನು ಹೆಚ್ಚಿಸಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜರ್ಮನಿ ಪ್ರವಾಸವನ್ನು ಪೂರ್ಣಗೊಳಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರ ಆಹ್ವಾನದ ಮೇರೆಗೆ ಅಧಿಕೃತ ಭೇಟಿಗಾಗಿ ನಾಳೆ ಕೋಪನ್ ಹ್ಯಾಗನ್ ಗೆ ತೆರಳಲಿದ್ದಾರೆ. ಇದು ಡೆನ್ಮಾರ್ಕ್ಗೆ ಅವರ ಮೊದಲ ಭೇಟಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.