ಬೆಂಗಳೂರು: ರಾಜ್ಯದ ಗಡಿ ಬಗ್ಗೆ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ರಾಜ್ಯದ ಗಡಿ ಪ್ರದೇಶದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಮಾಜಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಸಹಾಯವಾಣಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಹಾರಾಷ್ಟ್ರದಲ್ಲಿನ ರಾಜಕಾರಣಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಅದಕ್ಕಾಗಿ ರಾಜ್ಯದ ಗಡಿ ಭಾಷೆಗಳ ಬಗ್ಗೆ ಕೆದಕುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಹಲವಾರು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಿವೆ . ಈ ಬಗ್ಗೆಯೂ ಕ್ರಮ ತೆಗೆದುಕೊಳ್ಳುವ ಚಿಂತನೆ ಸರ್ಕಾರ ಮಾಡುತ್ತಿದೆ. ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಈ ರೀತಿಯನ್ನು ಮಹಾರಾಷ್ಟ್ರದ ಎಲ್ಲಾ ರಾಜಕಾರಣಿಗಳು ಕೈಬಿಡುವಂತೆ ಮುಖ್ಯಮಂತ್ರಿಗಳು ಆಗ್ರಹಿಸಿದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.