ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಇಂದು ನೃಪತುಂಗ ವಿಶ್ವವಿದ್ಯಾಲಯ ಉದ್ಘಾಟನೆ ಹಾಗೂ ಶೈಕ್ಷಣಿಕ ಸಮುಚ್ಛಯದ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಲದೇ ಬಳ್ಳಾರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ವರ್ಚುವಲ್ ಉದ್ಘಾಟನೆ ಮಾಡಿದರು ಮತ್ತು ಕರ್ನಾಟಕ ಪೊಲೀಸ್ ಇಲಾಖೆಯ E-BEAT ಆ್ಯಪ್ಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾ ಅವರು, ನರೇಂದ್ರ ಮೋದಿಯವರ ನಾಯಕತ್ವದಡಿ, ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಮತ್ತು ಜನರ ಕಲ್ಯಾಣಕ್ಕಾಗಿ ಅವಿರತ ಶ್ರಮಿಸುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕಾಗಿ ಮುಂದಿನ ತಲೆಮಾರಿನ ಮೂಲಸೌಕರ್ಯ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.