ಕೋಪನ್ ಹೇಗನ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋಪನ್ ಹೇಗನ್ನಲ್ಲಿ ನಾರ್ವೆಯ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಈ ಬಗ್ಗೆ ಪ್ರಧಾನ ಮಂತ್ರಿಗಳ ಕಚೇರಿ ಟ್ವಿಟ್ ಮಾಡಿದ್ದು, “ನಾರ್ವೆಯೊಂದಿಗೆ ಸ್ನೇಹವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳ ನರೇಂದ್ರ ಮೋದಿ ಮತ್ತು ಜೊನಾಸ್ ಗಹರ್ ಕೋಪನ್ ಹೇಗನ್ನಲ್ಲಿ ಭೇಟಿಯಾದರು. ಉಭಯ ನಾಯಕರು ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಶ್ರೇಣಿಯನ್ನು ಮತ್ತು ಅಭಿವೃದ್ಧಿಯ ಸಹಕಾರವನ್ನು ಗಾಢಗೊಳಿಸುವ ಮಾರ್ಗಗಳನ್ನು ಚರ್ಚಿಸಿದರು” ಎಂದಿದೆ.
ಇಂದು ಎರಡನೇ ಭಾರತ-ನಾರ್ಡಿಕ್ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಡೆನ್ಮಾರ್ಕ್, ಐಸ್ಲ್ಯಾಂಡ್, ಫಿನ್ಲ್ಯಾಂಡ್, ಸ್ವೀಡನ್ ಮತ್ತು ನಾರ್ವೆಯ ಪ್ರಧಾನ ಮಂತ್ರಿಗಳು ಭಾಗವಹಿಸಲಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಸ್ವೀಡನ್, ಐಸ್ಲ್ಯಾಂಡ್ ಮತ್ತು ಫಿನ್ಲ್ಯಾಂಡ್ ಪ್ರಧಾನ ಮಂತ್ರಿಗಳೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. “ಶೃಂಗಸಭೆಯ ಸೈಡ್ಲೈನ್ನಲ್ಲಿ, ನಾನು ಇತರ ನಾಲ್ಕು ನಾರ್ಡಿಕ್ ದೇಶಗಳ ನಾಯಕರನ್ನು ಭೇಟಿ ಮಾಡುತ್ತೇನೆ ಮತ್ತು ಅವರೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಪರಿಶೀಲಿಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Boosting friendship with Norway.
Prime Ministers @narendramodi and @jonasgahrstore meet in Copenhagen. They are taking stock of the full range of bilateral relations between the two nations and ways to deepen developmental cooperation. pic.twitter.com/FbxzJHiyYU
— PMO India (@PMOIndia) May 4, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.