ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪ್ಯಾರಿಸ್ನಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಹೇಳಿಕೆ ಹೊರಡಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, “ಪ್ರಧಾನಮಂತ್ರಿಯವರು ಮ್ಯಾಕ್ರನ್ ಅವರನ್ನು ವೈಯಕ್ತಿಕ ಮತ್ತು ನಿಯೋಗ ಮಟ್ಟದಲ್ಲಿ ಭೇಟಿಯಾದರು. ರಕ್ಷಣಾ ಸಹಕಾರ, ಬಾಹ್ಯಾಕಾಶ, ನೀಲಿ ಆರ್ಥಿಕತೆ, ನಾಗರಿಕ ಪರಮಾಣು ಮತ್ತು ಜನರ ನಡುವಿನ ಸಂಬಂಧ ಸೇರಿದಂತೆ ದ್ವಿಪಕ್ಷೀಯ ವಿಷಯಗಳ ಸಂಪೂರ್ಣ ಶ್ರೇಣಿಯ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು” ಎಂದಿದ್ದಾರೆ.
ಉಭಯ ನಾಯಕರು ಪ್ರಾದೇಶಿಕ ಮತ್ತು ಜಾಗತಿಕ ಭದ್ರತಾ ದೃಷ್ಟಿಕೋನದ ಬಗ್ಗೆ ಮತ್ತು ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯನ್ನಾಗಿ ಮಾಡುವಲ್ಲಿ ಒಟ್ಟಾಗಿ ಕೆಲಸ ಮಾಡುವ ಮಾರ್ಗಗಳ ಬಗ್ಗೆ ಚರ್ಚಿಸಿದರು.
ಪ್ರಧಾನಿಯವರ ಫ್ರಾನ್ಸ್ ಭೇಟಿಯು ಎರಡು ದೇಶಗಳ ನಡುವೆ ಮಾತ್ರವಲ್ಲದೆ ಉಭಯ ನಾಯಕರ ನಡುವಿನ ಬಲವಾದ ಬಾಂಧವ್ಯ ಮತ್ತು ಸೌಹಾರ್ದತೆಯನ್ನು ಪ್ರದರ್ಶಿಸಿದೆ. ಆದಷ್ಟು ಬೇಗ ಭಾರತಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಪ್ರಧಾನಿ ಆಹ್ವಾನಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.