ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿಯಾಚೆಗಿನ ಸುರಂಗವೊಂದನ್ನು ಪತ್ತೆಹಚ್ಚಿರುವುದಾಗಿ ಗಡಿ ಭದ್ರತಾ ಪಡೆ ಬಿಎಸ್ಎಫ್ ಇಂದು ತಿಳಿಸಿದೆ.
ಸುರಂಗ ಪತ್ತೆ ಹಚ್ಚುವ ಮೂಲಕ ಬಿಎಸ್ಎಫ್ ಶೀಘ್ರದಲ್ಲೇ ಆರಂಭವಾಗಲಿರುವ ಅಮರನಾಥ ಯಾತ್ರೆಗೆ ಅಡ್ಡಿಪಡಿಸುವ ಪಾಕಿಸ್ಥಾನ ಮೂಲದ ಭಯೋತ್ಪಾದಕರ ಯೋಜನೆಗಳನ್ನು ವಿಫಲಗೊಳಿಸಿದೆ. ಜಮ್ಮು ಪ್ರದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
ಬುಧವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಸಾಂಬಾದಲ್ಲಿರುವ ಚಕ್ ಫಕ್ವಿರಾ ಗಡಿ ಹೊರಠಾಣೆ ವ್ಯಾಪ್ತಿಯಲ್ಲಿ 150 ಮೀಟರ್ ಉದ್ದದ ಸುರಂಗ ಪತ್ತೆಯಾಗಿದೆ ಎಂದು ಬಿಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಸುರಂಗವನ್ನು ಹೊಸದಾಗಿ ಅಗೆಯಲಾಗಿದೆ, ಇದು ಪಾಕಿಸ್ಥಾನದ ಕಡೆಯಿಂದ ಆರಂಭಗೊಂಡಿದೆ. ಇ ಸುರಂಗದ ನಿರ್ಗಮನವನ್ನು ಬಲಪಡಿಸಲು ಬಳಸಲಾದ 21 ಮರಳಿನ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಡಿಐಜಿ ಎಸ್ಪಿಎಸ್ ಸಂಧು ಹೇಳಿದ್ದಾರೆ.
ಇಂದು ಸುರಂಗವನ್ನು ವಿವರವಾಗಿ ಶೋಧಿಸಲಾಗುವುದು ಎಂದು ಸಂಧು ಹೇಳಿದ್ದಾರೆ.
ಏಪ್ರಿಲ್ 22 ರಂದು ಜಮ್ಮುವಿನ ಸುಂಜ್ವಾನ್ ಪ್ರದೇಶದಲ್ಲಿ ಸಿಐಎಸ್ಎಫ್ ಬಸ್ ಮೇಲೆ ದಾಳಿ ಮಾಡಿ ಸಹಾಯಕ ಸಬ್ ಇನ್ಸ್ಪೆಕ್ಟರ್ನನ್ನು ಕೊಂದ ಬಳಿಕ ಭದ್ರತಾ ಪಡೆಗಳು ಇಬ್ಬರು ಆತ್ಮಾಹುತಿ ಬಾಂಬರ್ಗಳನ್ನು ಸಂಹರಿಸಿತ್ತು. ಈ ಘಟನೆ ನಡೆದು ಸುಮಾರು ಹದಿನೈದು ದಿನಗಳ ನಂತರ ಸುರಂಗದ ಪತ್ತೆಯಾಗಿದೆ.
ಭೂಗತ ಸುರಂಗವನ್ನು ಪಾಕಿಸ್ಥಾನ ಮೂಲದ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಗುಂಪಿನ ಇಬ್ಬರು ಆತ್ಮಾಹುತಿ ಬಾಂಬರ್ಗಳು ಭಾರತಕ್ಕೆ ನುಸುಳಲು ಬಳಸಿದ್ದಾರೆ ಎಂದು ನಂಬಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.