ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಕಾಡಿನ ಬಟ್ಕೂಟ್ ಪ್ರದೇಶದ ಪೂರ್ವದಲ್ಲಿರುವ ಸಿರ್ಚಾನ್ ಟಾಪ್ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಕೊಲ್ಲಲಾಗಿದೆ.
ಈ ಪ್ರದೇಶದಲ್ಲಿ ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ಜಮ್ಮು-ಕಾಶ್ಮೀರ ಪೊಲೀಸರು ಪಡೆದ ನಿರ್ದಿಷ್ಟ ಮಾಹಿತಿ ಮೇರೆಗೆ ಪೊಲೀಸ್, ಸೇನೆಯ 3 ಆರ್ಆರ್ ಮತ್ತು ಸಿಆರ್ಪಿಎಫ್ ಜಂಟಿ ತಂಡವು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಡೆಗಳ ಜಂಟಿ ಶೋಧ ತಂಡವು ಶಂಕಿತ ಸ್ಥಳವನ್ನು ಸಮೀಪಿಸುತ್ತಿದ್ದಂತೆ, ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದರು, ಹೀಗಾಗಿ ಪ್ರತಿದಾಳಿ ನಡೆಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಂಬರುವ ಅಮರನಾಥ ಯಾತ್ರೆಯನ್ನು ಗಮನದಲ್ಲಿಟ್ಟುಕೊಂಡು ಪಹಲ್ಗಾಮ್ ಬೆಟ್ಟಗಳನ್ನು ಇತ್ತೀಚಿನ ದಿನಗಳಲ್ಲಿ ತೀವ್ರ ಕಣ್ಗಾವಲಿನಲ್ಲಿ ಇಡಲಾಗಿದೆ.
ಈ ಪ್ರದೇಶದಲ್ಲಿ ಎರಡರಿಂದ ನಾಲ್ಕು ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇವರಗಾಗಿ ಕಾರ್ಯಾಚರಣೆ ನಡೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.