ಬೆಂಗಳೂರು: ಮೇ 7ರಂದು ಸಂಚಾರಿ ಪಶು ಸಂಜೀವಿನಿ ವಾಹನ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸರ್ಕಾರವು 44 ಕೋಟಿ ರೂ. ವೆಚ್ಚದಲ್ಲಿ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಮಂಜೂರು ನೀಡಿದೆ. ಇದರಲ್ಲಿ 70 ವಾಹನ ನಾಳೆ ಲೋಕಾರ್ಪಣೆಯಾಗಲಿದೆ.
ನಾಡಿನ ಜಾನುವಾರುಗಳ ಆರೋಗ್ಯ ಸೇವೆಗಾಗಿ 275 ಆಂಬ್ಯುಲೆನ್ಸ್ ಗಳ ಪೈಕಿ 70 ಅಂಬ್ಯುಲೆನ್ಸ್ಗಳನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಪಶು ಸಂಗೋಪಣಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ರಾಜ್ಯದಲ್ಲಿ ದನ, ಎಮ್ಮೆ, ಕುರಿ, ಮೇಕೆ ಮತ್ತು ಹಂದಿ ಸೇರಿದಂತೆ 290 ಲಕ್ಷ ಜಾನುವಾರುಗಳಿದ್ದು, ಪ್ರತಿ ಒಂದು ಲಕ್ಷ ಜಾನುವಾರುಗಳಿಗೆ ಒಂದು ಸಂಚಾರಿ ಚಿಕಿತ್ಸಾ ವಾಹನದಂತೆ 275 ವಾಹನ ಒದಗಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಸಂಚಾರಿ ಪಶು ಚಿಕಿತ್ಸಾ ವಾಹನಗಳ ನಿಗಾ ವ್ಯವಸ್ಥೆಗಾಗಿ ಪ್ರತ್ಯೇಕ ಕಾಲ್ ಸೆಂಟರ್ ಸ್ಥಾಪಿಸಲಾಗಿದ್ದು, ರೈತರಿಂದ ಟ್ರೋಲ್ ಫ್ರೀ ಸಂಖ್ಯೆಗೆ 1962ಕ್ಕೆ ಕರೆ ಬಂದ ತಕ್ಷಣ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಾಗುವುದು. ಪ್ರತಿ ಚಿಕಿತ್ಸಾ ವಾಹನದಲ್ಲಿ ಪಶು ವೈದ್ಯರು, ಪಶು ವೈದ್ಯ ಸಹಾಯಕ ಮತ್ತು ವಾಹನ ಚಾಲಕ ಕಂ ದರ್ಜೆ ನೌಕಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ರೈತರಿಗೆ, ಜಾನುವಾರು ಸಾಕಾಣಿಕೆದಾರರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಜಾನುವಾರುಗಳ ಸಂರಕ್ಷಣೆ, ಪಾಲನೆ ಮತ್ತು ಆರೋಗ್ಯ ರಕ್ಷಣೆಗಾಗಿ ಸುಸಜ್ಜಿತ ಶಸ್ತ್ರ ಚಿಕಿತ್ಸಾ ವಾಹನಗಳ ಮೂಲಕ ಪಶು ಸಂಜೀವಿನಿ ಯೋಜನೆ ಜಾರಿಗೆ ತರಲಾಗಿತ್ತು. ಇದರ ಮುಂದುವರೆದ ಭಾಗವೇ ಸಂಚಾರಿ ಪಶು ಚಿಕಿತ್ಸಾ ವಾಹನವಾಗಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.